Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನೆ ಮನೆಗೆ ಲಸಿಕಾ ಮಿತ್ರ: ಉಡುಪಿ...

ಮನೆ ಮನೆಗೆ ಲಸಿಕಾ ಮಿತ್ರ: ಉಡುಪಿ ಜಿಲ್ಲೆಯಲ್ಲಿ ಲಸಿಕೆ ಪಡೆವವರ ಸಂಖ್ಯೆ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ4 Dec 2021 7:55 PM IST
share
ಮನೆ ಮನೆಗೆ ಲಸಿಕಾ ಮಿತ್ರ: ಉಡುಪಿ ಜಿಲ್ಲೆಯಲ್ಲಿ ಲಸಿಕೆ ಪಡೆವವರ ಸಂಖ್ಯೆ ಹೆಚ್ಚಳ

ಉಡುಪಿ, ಡಿ.4: ಕೋವಿಡ್‌ನಿಂದ ಗರಿಷ್ಠ ಸುರಕ್ಷತೆ ಪಡೆಯಲು 2 ಡೋಸ್ ಲಸಿಕೆಯನ್ನು ಪಡೆಯುವುದು ಅಗತ್ಯವಾಗಿದೆ. ಆದರೆ, ಈಗಾಗಲೇ ಮೊದಲನೇ ಡೋಸ್ ಪಡೆದವರು ತಮ್ಮಲ್ಲಿ ರೋಗ ನಿರೋಧಕ ಶಕ್ತಿ ಅಧಿಕಗೊಂಡಿದ್ದು, ಕೋವಿಡ್ ಸೋಂಕು ತಗುಲಿದರೂ ನಮಗೆ ಯಾವುದೇ ಅಪಾಯವಿಲ್ಲ, ಹೀಗಾಗಿ ಎರಡನೇ ಡೋಸ್ ಪಡೆಯಬೇಕಾಗಿಲ್ಲ ಎಂಬ ಭಾವನೆಯಿಂದ ಬಹಳಷ್ಟು ಮಂದಿ ಮೊದಲ ಡೋಸ್ ಪಡೆದು ಅವಧಿ ಮೀರಿದ್ದರೂ ಲಸಿಕಾ ಕೇಂದ್ರಗಳಿಗೆ ಬರುವುದನ್ನು ತಪ್ಪಿಸಿಕೊಳ್ಳುತಿದ್ದರು.

ಆದರೆ ಇದೀಗ ಜಿಲ್ಲಾಡಳಿತ ‘ಮನೆ ಮನೆಗೆ ಲಸಿಕಾ ಮಿತ್ರ’ ಕಾರ್ಯಕ್ರಮ ಆರಂಭಿಸಿದ್ದು, ಲಸಿಕೆ ಪಡೆಯದವರ ಮಾಹಿತಿ ಸಂಗ್ರಸಿಹಿ ಅವರ ಮನವೊಲಿಸಿ ಲಸಿಕೆ ನೀಡುತ್ತಿರುವುದರಿಂದ ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಪಡೆಯದ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಲಸಿಕಾ ಮಿತ್ರರು ಕಾರ್ಯಕ್ರಮವನ್ನು ನ.22ರಿಂದ 30ರವರೆಗೆ ಜಿಲ್ಲೆಯ ಪ್ರತೀ ಮನೆಗೆ ಮತದಾರರ ಪಟ್ಟಿಯೊಂದಿಗೆ ಭೇಟಿ ನೀಡುವ ಮೂಲಕ, ಲಸಿಕೆ ಪಡೆದಿರುವ ಮತ್ತು ಪಡೆಯದಿರುವವರ ಬಗ್ಗೆ ಪರಿಶೀಲನೆ ನಡೆಸಲಾಗಿದೆ.

ಜಿಲ್ಲೆಯ ಮತದಾರರ ಪಟ್ಟಿಯ ಪ್ರಕಾರ ಜಿಲ್ಲೆಯ 158 ಗ್ರಾಮ ಪಂಚಾಯತ್ ಗಳ 1,111 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಒಟ್ಟು 10,11,885 ಮಂದಿ 18 ವರ್ಷ ಮೇಲ್ಪಟ್ಟವರಿದ್ದು, ಹೊರ ಜಿಲ್ಲೆ/ರಾಜ್ಯ/ದೇಶದಲ್ಲಿ 96,377 ಮಂದಿ ಇದ್ದಾರೆ. ಮೃತಪಟ್ಟವರು ಮತ್ತು ಜಿಲ್ಲೆಯಿಂದ ಹೊರಗಿರುವವರನ್ನು ಹೊರತು ಪಡಿಸಿದರೆ ಒಟ್ಟು ಪ್ರಸ್ತುತ 8,97,728 ಮಂದಿ ಪ್ರಥಮ ಡೋಸ್ ಪಡೆಯುವ ಅರ್ಹ ನಾಗರಿಕರಿದ್ದು, ಇದರಲ್ಲಿ 8,70,423 ಮಂದಿ ಈಗಾಗಲೇ ಪ್ರಥಮ ಡೋಸ್, 7,38,220 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದು, 27,305 ಮಂದಿ ಪ್ರಥಮ ಡೋಸ್ ಮತ್ತು 1,32,203 ಮಂದಿ ಎರಡನೇ ಡೋಸ್ ಪಡೆಯಲು ಬಾಕಿ ಇದ್ದಾರೆ ಎಂದು ಗುರುತಿಸಲಾಗಿದೆ.

ಜಿಲ್ಲೆಯಲ್ಲಿ ನವೆಂಬರ್ 26ಕ್ಕೆ 1020 ಮಂದಿ ಪ್ರಥಮ ಡೋಸ್, 11,201 ಮಂದಿ ಎರಡನೇ ಡೋಸ್, 27ಕ್ಕೆ 978 ಮಂದಿ ಪ್ರಥಮ ಡೋಸ್, 8,077 ಮಂದಿ ಎರಡನೇ ಡೋಸ್, 28ಕ್ಕೆ 512 ಮಂದಿ ಪ್ರಥಮ ಡೋಸ್, 3,668 ಮಂದಿ ಎರಡನೇ ಡೋಸ್, 29ಕ್ಕೆ 1,825 ಮಂದಿ ಪ್ರಥಮ ಡೋಸ್, 12,898 ಎರಡನೇ ಡೋಸ್, 30ಕ್ಕೆ 1,650 ಮಂದಿ ಪ್ರಥಮ ಡೋಸ್, 10,216 ಎರಡನೇ ಡೋಸ್, ಡಿಸೆಂಬರ್ 1ಕ್ಕೆ 2503 ಮಂದಿ ಪ್ರಥಮ ಡೋಸ್, 13,973 ಮಂದಿ ಎರಡನೇ ಡೋಸ್, ಡಿ.2ಕ್ಕೆ 1,471 ಮಂದಿ ಪ್ರಥಮ ಡೋಸ್, 6,878 ಮಂದಿ ಎರಡನೇ ಡೋಸ್, ಡಿ.3ಕ್ಕೆ 1681 ಮಂದಿ ಪ್ರಥಮ ಡೋಸ್, 8,408 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

ಒಂದೇ ವಾರದಲ್ಲಿ ಜಿಲ್ಲೆಯ ಪ್ರಥಮ ಡೋಸ್ ಲಸಿಕೆ ಪ್ರಮಾಣ ಶೇ.93ರಿಂದ ಶೇ.94.02ಕ್ಕೆ ಏರಿಕೆಯಾಗಿದ್ದು, ಈ ಅವಧಿಯಲ್ಲಿ 11,620 ಮಂದಿ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯುವವರ ಪ್ರಮಾಣ ಶೇ.67ರಿಂದ ಶೇ.72ಕ್ಕೆ ಏರಿಕೆಯಾಗಿದ್ದು, 64,118 ಮಂದಿ ಲಸಿಕೆ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಪ್ರಥಮ ಡೋಸ್ ಲಸಿಕೆ ಪಡೆದು ಹೊರ ಜಿಲ್ಲೆ/ ರಾಜ್ಯಗಳಿಗೆ ತೆರಳಿರುವ ನಾಗರಿಕರು ತಾವು ಇರುವಲ್ಲಿಯೇ 2ನೇ ಡೋಸ್ ಲಸಿಕೆ ಪಡೆಯ ಬೇಕು. ಇದುವರೆಗೂ ಪ್ರಥಮ ಡೋಸ್ ಪಡೆಯಲು ಬಾಕಿ ಇರುವ ಹಾಗೂ ಎರಡನೇ ಡೋಸ್ ಪಡೆ ಯಲು ಅರ್ಹರಿರುವ ಸಾರ್ವಜನಿಕರು ಆದ್ಯತೆಯ ಮೇಲೆ ಲಸಿಕೆ ಪಡೆದರೆ ಉಡುಪಿ ಜಿಲ್ಲೆ ಲಸಿಕಾಕರಣದಲ್ಲಿ ಶೀಘ್ರವೇ ಶೇ.100 ಸಾಧನೆ ಮಾಡಲು ಸಾಧ್ಯವಾಗುತ್ತದೆ.

ಶೀಘ್ರವೇ ಶೇ.100 ಸಾಧನೆಯ ವಿಶ್ವಾಸ

ಉಡುಪಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ 2 ಡೋಸ್ ಕೋವಿಡ್ ಲಸಿಕೆ ನೀಡಿ ಅವರನ್ನು ಕೋವಿಡ್‌ನಿಂದ ರಕ್ಷಿಸುವುದು ಹಾಗೂ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಮತದಾರರ ಪಟ್ಟಿಯ ಮೂಲಕ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆಯದವರ ಮಾಹಿತಿ ಗಳನ್ನು ಸಂಗ್ರಹಿಸಲಾಗಿದೆ. ಇದುವರೆಗೂ ಲಸಿಕೆ ಪಡೆಯದವರ ಮನವೊಲಿಸಿ ಲಸಿಕೆಯ ಮಹತ್ವ ತಿಳಿಸಿ ಲಸಿಕೆ ನೀಡಲಾಗುತ್ತಿದೆ. ಎಲ್ಲಾ ಸಮುದಾಯಗಳ ಮುಖಂಡರು, ಸಂಘ ಸಂಸ್ಥೆಗಳೂ ಹಾಗೂ ಸಾರ್ವಜನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ. ಕೂಲಿ ಕಾರ್ಮಿಕರು ಲಸಿಕೆ ಪಡೆಯಲು ಅನುಕೂಲವಾಗುವಂತೆ ರವಿವಾರದಂದು ವಿಶೇಷ ಲಸಿಕಾ ಶಿಬಿರ ಆಯೋಜಿಸಲಾಗುತ್ತಿದೆ.

ನಮ್ಮ ಜಿಲ್ಲೆಯು ಶೀಘ್ರದಲ್ಲಿ ಲಸಿಕಾಕರಣದಲ್ಲಿ ಶೇ.100 ಗುರಿ ತಲುಪುವ ವಿಶ್ವಾಸವಿದೆ. ಉಡುಪಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ 2 ಡೋಸ್ ಕೋವಿಡ್ ಲಸಿಕೆ ನೀಡಿ ಅವರನ್ನು ಕೋವಿಡ್‌ನಿಂದ ರಕ್ಷಿಸುವುದು ಹಾಗೂ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಮತದಾರರ ಪಟ್ಟಿಯ ಮೂಲಕ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆಯದವರ ಮಾಹಿತಿಗಳನ್ನುಸಂಗ್ರಹಿಸಲಾಗಿದೆ. ಇದುವರೆಗೂ ಲಸಿಕೆ ಪಡೆಯದವರ ಮನವೊಲಿಸಿ ಲಸಿಕೆಯ ಮಹತ್ವ ತಿಳಿಸಿ ಲಸಿಕೆ ನೀಡಲಾಗುತ್ತಿದೆ. ಎಲ್ಲಾ ಸಮುದಾಯಗಳ ಮುಖಂಡರು, ಸಂಘಸಂಸ್ಥೆಗಳೂ ಹಾಗೂ ಸಾರ್ವಜನಿಕರು ಉತ್ತಮ ಸಹಕಾರ ನೀಡುತ್ತಿದ್ದಾರೆ.

ಕೂಲಿ ಕಾರ್ಮಿಕರು ಲಸಿಕೆ ಪಡೆಯಲು ಅನುಕೂಲವಾಗುವಂತೆ ರವಿವಾರದಂದು ವಿಶೇಷ ಲಸಿಕಾ ಶಿಬಿರ ಆಯೋಜಿಸಲಾಗುತ್ತಿದೆ. ನಮ್ಮ ಜಿಲ್ಲೆಯು ಶೀಘ್ರದಲ್ಲಿ ಲಸಿಕಾಕರಣದಲ್ಲಿ ಶೇ.100 ಗುರಿ ತಲುಪುವ ವಿಶ್ವಾಸವಿದೆ.

-ಕೂರ್ಮಾರಾವ್ ಎಂ., ಉಡುಪಿ ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X