Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್'...

‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಹೆಸರಿನಲ್ಲಿ ದೇಶ ಸಂಪೂರ್ಣ ನಾಶ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ4 Dec 2021 9:13 PM IST
share
‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೆಸರಿನಲ್ಲಿ ದೇಶ ಸಂಪೂರ್ಣ ನಾಶ: ಮಲ್ಲಿಕಾರ್ಜುನ ಖರ್ಗೆ

ಯಾದಗಿರಿ, ಡಿ. 4: ‘ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಹೆಸರಿನಲ್ಲಿ ದೇಶವನ್ನು ಸಂಪೂರ್ಣ ನಾಶ ಮಾಡಿದೆ. ಬಿಜೆಪಿ ಪ್ರಚಾರಕ್ಕೆ ಯಾವ ಯೋಜನೆಯೂ ಉಳಿದಿಲ್ಲ. ಹೀಗಾಗಿ ನಮ್ಮ ಸರಕಾರದ ಅವಧಿಯಲ್ಲಿ ರೂಪಿಸಿದ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಇವರಿಗೆ ಆಗಿಲ್ಲ' ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಟೀಕಿಸಿದ್ದಾರೆ.

ಶನಿವಾರ ನಗರದಲ್ಲಿ ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣಾ ಅಂಗವಾಗಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೇಶದಲ್ಲಿ ಎಪ್ಪತ್ತು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ವೈದ್ಯಕೀಯ ಕಾಲೇಜು, ಅಣೆಕಟ್ಟು ಕಟ್ಟಿ ನೀರಾವರಿ ಸೌಲಭ್ಯ ಕಲ್ಪಿಸಿದ್ದೇವೆ. ನೀರಾವರಿ, ಕೆರೆ ಕಟ್ಟಿದ್ದರಿಂದ ಈಗ ಹೊಟ್ಟೆ ತುಂಬಾ ಅನ್ನ ಸಿಗುತ್ತಿದೆ. ಆದರೆ, ಮೋದಿ 6 ತಿಂಗಳಲ್ಲಿ 15 ಲಕ್ಷ ರೂ. ಕೊಡುತ್ತೇನೆ ಎಂದಿದ್ದರು. ಆದರೆ, ಅದು ಇನ್ನೂ ಬರಲಿಲ್ಲ' ಎಂದು ಮೋದಿ ವಾಗ್ದಾಳಿ ನಡೆಸಿದರು.

ಸರಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗಿಕರಣ ಮಾಡಿದ ಪರಿಣಾಮ ಸಾವಿರಾರು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಗರಿಷ್ಠ ಮೊತ್ತದ ನೋಟ್ ರದ್ದು ಮಾಡಿದರು. ಕಪ್ಪು ಹಣವೂ ಬರಲಿಲ್ಲ. ಇಂತಹ ಸ್ಥಿತಿಯನ್ನು ಬಿಜೆಪಿ ತಂದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

ನಮ್ಮ ಅವಧಿಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಬೆಲೆ 400 ರೂ.ಗಳಿತ್ತು. ಇದೀಗ ಅದರ ದರ ಸಾವಿರ ರೂ.ಗಳಿಗೆ ಏರಿಕೆಯಾಗಿದೆ. ಕೇಂದ್ರ ಸರಕಾರ ಸಬ್ಸಿಡಿಯನ್ನು ನೀಡುತ್ತಿಲ್ಲ. ಯುಪಿ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಹಾಗೂ ಉಪಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಇಂತಹವರಿಗೆ ಮತದಾರರು ಪಾಠ ಕಲಿಸಬೇಕು ಎಂದು ಅವರು ಕೋರಿದರು.

ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಸ್ಥಳೀಯ ಸಂಸ್ಥೆಗಳ ಸಮಸ್ಯೆಯನ್ನು ಪರಿಷತ್‍ನಲ್ಲಿ ಸಮರ್ಪಕವಾಗಿ ಚರ್ಚಿಸುವ ಮೂಲಕ ಪರಿಹಾರ ಕಲ್ಪಿಸಲು ಆದ್ಯತೆ ನೀಡಲಿದ್ದಾರೆ. ನಮ್ಮ ಅಭ್ಯರ್ಥಿ ಎಂದಿಗೂ ಮನೆಯಲ್ಲಿ ಕೂರುವವರಲ್ಲ. ಹೀಗಾಗಿ ಸ್ಥಳೀಯ ಸಂಸ್ಥೆಯ ಮತದಾರರು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಖರ್ಗೆ ಇದೇ ವೇಳೆ ಮನವಿ ಮಾಡಿದರು.

ಸಭೆಯಲ್ಲಿ ಶಾಸಕರಾದ ಶರಣಬಸವಪ್ಪ ದರ್ಶನಾಪುರ, ಡಾ.ಅಜಯ ಸಿಂಗ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತನ್ನೂರು, ಮಾಜಿ ಸಂಸದ ಬಿ.ವಿ.ನಾಯಕ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X