ಆರ್ಗೋಡು ಮೋಹನದಾಸ ಶೆಣೈಗೆ ಚಿಟ್ಟಾಣಿ ಪ್ರಶಸ್ತಿ ಪ್ರದಾನ

ಉಡುಪಿ, ಡಿ.4: ಉಡುಪಿ ಶ್ರೀಕೃಷ್ಣ ಮಠ, ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ಚಿಟ್ಟಾಣಿ ಅಭಿಮಾನಿ ಬಳಗ ವತಿಯಿಂದ ರಾಜಾಂಗಣದಲ್ಲಿ ಶನಿವಾರ ನಡೆದ ಚಿಟ್ಟಾಣಿ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಸ್ತಿಯನ್ನು ಪ್ರದಾನ ಮಾಡಲಾಯಿತು.
ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಕಲಾವಿದ ಆರ್ಗೋಡು ಮೋಹನದಾಸ ಶೆಣೈ ಹಾಗೂ ಟಿ.ವಿ.ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಮೂಕಾಂಬಿಕಾ ವಾರಂಬಳ್ಳಿಯವರಿಗೆ ಅದಮಾರು ಪರ್ಯಾಯ ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಪ್ರದಾನ ಮಾಡಿದರು.
ಅಭಿಮಾನಿ ಬಳಗದ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್, ಕಲಾರಂಗದ ಅಧ್ಯಕ್ಷ ಗಂಗಾಧರ ರಾವ್ ಮೊದಲಾದ ವರು ಉಪಸ್ಥಿತರಿದ್ದರು.
Next Story





