Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಿ:...

ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ4 Dec 2021 9:53 PM IST
share
ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಡಿ.4: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ, ಯಾವುದೇ ಗೊಂದಲ ಹಾಗೂ ದೋಷ ಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದ್ದಾರೆ.

ಶನಿವಾರ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ತೊಡಗಿರುವ ಉಡುಪಿ ಮತ್ತು ಕಾಪು ತಾಲೂಕಿನ ಎಲ್ಲಾ ಮತಗಟ್ಟೆ ಅಧಿಕಾರಿ ಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ 2022 ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ಅರ್ಹ ಮತದಾರರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಕ್ಷೇತ್ರದಿಂದ ಹೊರ ಹೋದವರು ಮತ್ತು ಮರಣ ಹೊಂದಿದವರ ಹೆಸರುಗಳನ್ನು ಆ ಕ್ಷೇತ್ರದ ಮತಗಟ್ಟೆಯ ಮತದಾರರ ಪಟ್ಟಿಯಿಂದ ಕೈಬಿಡುವಂತೆ ತಿಳಿಸಿದರು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈ ಬಿಡುವ ಮುನ್ನ ಮತ್ತೊಮ್ಮೆ ಆ ಮನೆಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸಿ ದೃಢಡಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಮತದಾರರ ಪಟ್ಟಯಲ್ಲಿ ತಪ್ಪುಗಳಿದ್ದರೆ, ಚುನಾವಣೆಯ ಮತದಾನ ದಿನದಂದು ಗೊಂದಲ, ಗಲಾಟೆಗಳು ಸಂಭವಿ ಸಲಿದ್ದು, ಇದರಿಂದ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಅಡ್ಡಿಯಾಗುತ್ತದೆ ಎಂದರು.

ಚುನಾವಣಾ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರ ಪಾತ್ರ ಅತ್ಯಂತ ಪ್ರಾಮುಖ್ಯತೆ ಹೊಂದಿದ್ದು, ಅರ್ಹ ಎಲ್ಲಾ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಹಾಗೂ ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆಯಬೇಕು. ನಿಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ 18 ವರ್ಷ ಪೂರ್ಣಗೊಂಡ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಶೇ.100 ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಲಸಿಕಾ ಮಿತ್ರ ಕಾರ್ಯಕ್ರಮದ ಮೂಲಕ ಮತದಾರರ ಪಟ್ಟಿಯನ್ನು ಉಪಯೋಗಿಸಿ ಕೊಂಡು, ಕೋವಿಡ್ ಲಸಿಕೆ ಪಡೆಯಲು ಅರ್ಹರಿರುವ 18 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಮೊದಲ ಡೋಸ್ ಪಡೆದ ನಾಗರಿಕರು, 2ನೇ ಡೋಸ್ ಪಡೆದ ಮತ್ತು ಪಡೆಯದ ನಾಗರಿಕರು, ಲಸಿಕೆ ಪಡೆಯದ ನಾಗರಿಕರನ್ನು ಈಗಾಗಲೇ ಗುರುತಿಸಲಾಗಿದೆ. ಎಲ್ಲಾ ಬಿಎಲ್‌ಓಗಳು ಮತದಾರರ ಪಟ್ಟಿ ಪರಿಶೀಲನೆ ಸಂದರ್ಭದಲ್ಲಿ, ತಮ್ಮ ಗ್ರಾಮಗಳಲ್ಲಿ ಲಸಿಕೆ ಪ್ರಗತಿ ಕುರಿತು ಮಾಹಿತಿಯನ್ನು ಪರಿಶೀಲಿಸಿ, ಎಲ್ಲರೂ ತಪ್ಪದೇ ಲಸಿಕೆ ಪಡೆಯುವಂತೆ ಮನವೊಲಿಸುವುದರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ಪಡೆದು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಕಾರ್ಯ ನಿರ್ವಹಿಸಬೇಕು ಎಂದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಸಂಬಂಧಪಟ್ಟ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಮತ್ತು ಬಿಎಲ್‌ಓಗಳು ಜಂಟಿಯಾಗಿ ತಪಾಸಣೆ ನಡೆಸಬೇಕು. ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ಶೇ.100ರಷ್ಟು ಲಸಿಕಾಕರಣವಾಗುವಂತೆ ನೋಡಿಕೊಳ್ಳಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸುವ ಸಿಬ್ಬಂದಿಯನ್ನು, ಮತದಾರರ ದಿನದಂದು ನಡೆಯುವ ಕಾರ್ಯಕ್ರಮದಲ್ಲಿ ಸೂಕ್ತ ರೀತಿಯಲ್ಲಿ ಅಭಿನಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಉಡುಪಿ ತಹಶೀ ಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ, ಜಿಲ್ಲಾ ಕೋವಿಡ್ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X