Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ...

ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರದ ವಿರೋಧ: ಕೇಂದ್ರಕ್ಕೆ ಸ್ಪಷ್ಟಪಡಿಸಿದ ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ4 Dec 2021 10:18 PM IST
share
ಕಸ್ತೂರಿ ರಂಗನ್  ವರದಿ  ಜಾರಿಗೆ ರಾಜ್ಯ  ಸರಕಾರದ ವಿರೋಧ: ಕೇಂದ್ರಕ್ಕೆ ಸ್ಪಷ್ಟಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು, ಡಿ.4: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಹೊಸದಿಲ್ಲಿಯಿಂದ ನಡೆಸಿದ ವರ್ಚುವಲ್ ಸಭೆಯಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಭಾಗವಹಿಸಿದ ಮುಖ್ಯಮಂತ್ರಿ ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು.

ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಅವರು ಸಭೆಯ ಗಮನಕ್ಕೆ ತಂದರು.

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಆನಂದ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X