ಪಿಯುಸಿ ಮಧ್ಯವಾರ್ಷಿಕ ವೇಳಾಪಟ್ಟಿಯಲ್ಲಿ ಸಮಯ ಬದಲಾವಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.4: ಪಿಯುಸಿ ಪರೀಕ್ಷೆಗಳು ಇದೇ ಡಿ.13ರಿಂದ ಡಿ.24ರವರೆಗೆ ನಡೆಯಲಿದ್ದು, ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟನೆ ಹೊರಡಿಸಿದೆ.
ಪರೀಕ್ಷೆ ನಿಗದಿಯಾಗಿರುವ ದಿನಾಂಕಗಳು ಮಳೆಗಾಲದ ದಿನಗಳಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಏಕಕಾಲದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ನಡೆಯಬೇಕಾದ ಪರೀಕ್ಷೆಗಳು ಬೆಳಗ್ಗೆ 9:30ಕ್ಕೆ ಪ್ರಾರಂಭವಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.
Next Story





