ಬೆಂಗಳೂರು: ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ. 5: ಒಂಬತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅಪಾರ್ಟ್ಮೆಂಟಿನ 12ನೆ ಮಹಡಿ ಮೇಲಿಂದ ಬಿದ್ದು ಮೃತ ಪಟ್ಟಿರುವ ಘಟನೆ ಇಲ್ಲಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ತಮ್ಮ ಕುಟುಂಬದ ಜತೆ ವೇಣು ಗೋಪಾಲ ನಗರದ ಅಪಾರ್ಟ್ಮೆಂಟಿನ 13ನೆ ಮಹಡಿಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ ಊಟ ಮಾಡಿದ ನಂತರ ಸುಮಾರು 10:30ರ ಸಮಯದಲ್ಲಿ ವಿದ್ಯಾರ್ಥಿನಿ 12ನೆ ಮಹಡಿಯಿಂದ ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೋ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹುಳಿಮಾವು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story