Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಮೈಕ್ರಾನ್ ಪ್ರಕರಣ: ಸಂಪರ್ಕಿತರಲ್ಲಿ...

ಒಮೈಕ್ರಾನ್ ಪ್ರಕರಣ: ಸಂಪರ್ಕಿತರಲ್ಲಿ ಸೋಂಕು ಕಂಡುಬಂದಿಲ್ಲ; ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ6 Dec 2021 7:20 PM IST
share
ಒಮೈಕ್ರಾನ್ ಪ್ರಕರಣ: ಸಂಪರ್ಕಿತರಲ್ಲಿ ಸೋಂಕು ಕಂಡುಬಂದಿಲ್ಲ; ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಡಿ.6: ರಾಜ್ಯದಲ್ಲಿ ಪತ್ತೆಯಾದ ಒಮೈಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಎರಡು ಪ್ರಕರಣಗಳು ಮಾತ್ರ ಪತ್ತೆಯಾಗಿವೆ. ಸೋಂಕಿತರ ಸಂಪರ್ಕದಲ್ಲಿದ್ದವರ ಜಿನೊಮಿಕ್ಸ್ ಸೀಕ್ವೆನ್ಸ್ ವರದಿ ಇನ್ನೂ ಬಂದಿಲ್ಲ. ಬೇರೆ ರಾಜ್ಯಗಳಲ್ಲಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಎಂದರು.

ನಮ್ಮ ರಾಜ್ಯದಲ್ಲಿ ಇಲ್ಲಿ ತನಕ ಎರಡು ಕೇಸ್ ಮಾತ್ರ ಇದೆ. ಅವರ ಸಂಪರ್ಕಿತರಿಗೆ ಯಾವುದೇ ಸಮಸ್ಯೆಗಳು, ಲಕ್ಷಣಗಳು ಕಂಡುಬಂದಿಲ್ಲ. ಬೌರಿಂಗ್ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡುತ್ತಿದ್ದು, ಆಸ್ಪತ್ರೆ ನಿರ್ದೇಶಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಒಮೈಕ್ರಾನ್ ಸೋಂಕಿತರ ಸಂಪರ್ಕ ಹೊಂದಿದ್ದವರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಅವರು ತಿಳಿಸಿದರು.

ಎರಡು ಡೋಸ್ ಲಸಿಕೆ ತೆಗೆದುಕೊಂಡವರಲ್ಲಿ ಒಮೈಕ್ರಾನ್ ಸೋಂಕು ತೀವ್ರತೆ ಇರುವುದಿಲ್ಲ. ಇದಕ್ಕೆ ಸೋಂಕಿತರ ಸಂಪರ್ಕದಲ್ಲಿರುವ ಲಕ್ಷಣಗಳೇ ಉದಾಹರಣೆಯಾಗಿದೆ. ಒಂದು ಡೋಸ್‍ನಿಂದ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರುವುದಿಲ್ಲ. ಎರಡೂ ಡೋಸ್ ತೆಗೆದುಕೊಂಡಾಗ ಮಾತ್ರ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರುತ್ತದೆ. ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಸುಧಾಕರ್ ಮನವಿ ಮಾಡಿದರು.

ಒಮೈಕ್ರಾನ್ ವಿಚಾರದಲ್ಲಿ ದೊಡ್ಡ ವ್ಯಾಖ್ಯಾನ ಮತ್ತು ಆತಂಕ ಪಡುವಂತಹದ್ದು ಏನೂ ಇಲ್ಲ. ಇದಕ್ಕಿಂತ ಹೆಚ್ಚು ಆತಂಕಕಾರಿಯಾಗಿದ್ದ ಡೆಲ್ಟಾ ರೂಪಾಂತರಿಯನ್ನೇ ನಾವು ಎದುರಿಸಿದ್ದೇವೆ.  ಡೆಲ್ಟಾಕ್ಕೆ ಹೋಲಿಕೆ ಮಾಡಿದರೆ, ಒಮೈಕ್ರಾನ್ ಹರಡುವಿಕೆಯಲ್ಲಿ ಮಾತ್ರ ಆತಂಕ ಸೃಷ್ಟಿಸಿದೆ. ಇದರ ತೀವ್ರತೆ ವಿಶ್ವದಲ್ಲಿ ಎಲ್ಲೂ ನೋಡಿಲ್ಲ ಎಂದು ಅವರು ಹೇಳಿದರು.

ಬೋಟ್ಸ್‍ವಾನಾ, ಸೌತ್ ಆಫ್ರಿಕಾ ಸೇರಿದಂತೆ ಒಮೈಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಿರುವ ದೇಶಗಳಲ್ಲಿ ತೀವ್ರತೆ ಕಾಣುತ್ತಿಲ್ಲ. ಈ ವೈರಸ್ ಲಕ್ಷಣಗಳು ಮೃದುವಾಗಿವೆ. ಹೀಗಾಗಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ಇದು ಬಹಳ ಬೇಗ ಹರಡುವುದರಿಂದ ಮುನ್ನೆಚ್ಚರಿಕೆ ಅವಶ್ಯಕವಾಗಿದೆ. ಇದು ಹರಡಬಾರದು ಅಂದರೆ ಲಸಿಕಾ ಕಾರ್ಯಕ್ರಮ ವೇಗವಾಗಿ ನಡೆಯಬೇಕು ಎಂದು ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಪಡೆದವರ ಪ್ರಮಾಣ ಶೇ.93ಕ್ಕೂ ಹೆಚ್ಚಾಗಿದೆ. 2ನೇ ಡೋಸ್ ಪಡೆದವರ ಪ್ರಮಾಣ ಶೇ.64ರಷ್ಟು ಇದೆ. ಲಸಿಕೆ ನೀಡಿದ ವಿಚಾರದಲ್ಲಿ ದೊಡ್ಡ ರಾಜ್ಯಗಳ ಪೈಕಿ ಕರ್ನಾಟಕ ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ಡಿಸೆಂಬರ್ ಅಂತ್ಯದ ಒಳಗೆ ಲಸಿಕಾ ಕಾರ್ಯಕ್ರಮ ಮುಗಿಸುವ ಉದ್ದೇಶವಿದೆ. ಅದಕ್ಕಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನೂ ಕೂಡ ಸುಮಾರು 70 ಲಕ್ಷ ಲಸಿಕೆ ದಾಸ್ತಾನು ಇದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಅವರು ಹೇಳಿದರು.

ಅಂತರ್‍ರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನಿರ್ಣಯ ತೆಗೆದುಕೊಳ್ಳಲಿದೆ. ಕೇಂದ್ರ ಸರಕಾರ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಅಂತ ಅಧ್ಯಯನ ಮಾಡುತ್ತಿದೆ. ಬೇರೆ ಬೇರೆ ದೇಶಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಕೂಡ ಅಧ್ಯಯನ ಮಾಡುತ್ತಿದೆ. ಸಮಗ್ರ ವರದಿ ಬಂದ ಮೇಲೆ ಏನು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನಿರ್ಧರಿಸಲಿದೆ ಎಂದು ಸುಧಾಕರ್ ತಿಳಿಸಿದರು. 

ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸ ನೋಡಿದಾಗ 2ನೇ ಅಲೆಯೇ ದೊಡ್ಡ ಪ್ರಮಾಣದ್ದಾಗಿದೆ. 3ನೇ ಅಲೆ ಕಡಿಮೆ ಪ್ರಭಾವ ಬೀರಿದೆ. ಇದಕ್ಕೆ ಐತಿಹಾಸಿಕ ಸಾಕ್ಷಿ ಕೂಡ ಇದೆ. ಹಿಂದೆ ಬಂದಿರುವ ಸಾಂಕ್ರಾಮಿಕ ರೋಗಗಳನ್ನು ನೋಡಿದಾಗ ಮೊದಲ ಅಲೆಗಿಂತ ಎರಡನೇ ಅಲೆ ತೀವ್ರವಾಗಿತ್ತು. 3 ಮತ್ತು 4ನೇ ಅಲೆ ಬಂದರೂ ಅದರ ತೀವ್ರತೆ ಕಡಿಮೆ ಇತ್ತು ಎಂದು ಅವರು ಹೇಳಿದರು.

ಮಕ್ಕಳ ಮೇಲೆ ಡೆಲ್ಟಾ ಪರಿಣಾಮ ಬೀರಿಲ್ಲ. ಡೆಲ್ಟಾಗೆ ಹೋಲಿಕೆ ಮಾಡಿದರೆ ಇದರ ತೀವ್ರತೆ ಕಡಿಮೆ. ಇದು ಮಕ್ಕಳಿಗೆ ಬಂದರೂ ಕೂಡ ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂದು ವಿಜ್ಞಾನಿಗಳು ಮತ್ತು ತಜ್ಞರು ಹೇಳಿದ್ದಾರೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X