Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ...

ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ6 Dec 2021 11:23 PM IST
share
ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಡಿ. 6: ‘ಸರ್ವರನ್ನು ಒಳಗೊಂಡ ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಂಡು, ಪಾಲಿಸಬೇಕು' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಂದಿಲ್ಲಿ ಕರೆ ನೀಡಿದ್ದಾರೆ.

ಸೋಮವಾರ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವಾದ ವಿಧಾನಸೌಧದ ಮುಂಭಾಗದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಅಂಬೇಡ್ಕರ್ ಅವರ ಪರಿಶ್ರಮ, ಅಧ್ಯಯನ ಶೀಲತೆ ಹಾಗೂ ಸಾಧನೆಯ ಜೀವನವು ಯುವ ಜನತೆಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ' ಎಂದು ತಿಳಿಸಿದರು.

‘ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಂದೇಶ ಹಾಗೂ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಪ್ರಜಾಪ್ರಭುತ್ವಕ್ಕೆ ಸಂವಿಧಾನವೇ ಅಡಿಪಾಯ. ಸಂವಿಧಾನದಿಂದ ಭಾರತದ ಪ್ರಜಾಪ್ರಭುತ್ವದ ಬೇರುಗಳು ಬಲವಾಗಿವೆ. ಭಾರತದಲ್ಲಿರುವಷ್ಟು ಸ್ವಾತಂತ್ರ್ಯ ಬೇರೆ ಯಾವ ದೇಶಗಳಲ್ಲೂ ಇಲ್ಲ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಘನತೆಯನ್ನು ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಿರುವ ಸಂವಿಧಾನ ಎತ್ತಿ ಹಿಡಿದಿದೆ’ ಎಂದು ನಾಗೇಶ್ ನುಡಿದರು. 

‘ತಮ್ಮ ಜೀವನಪೂರ್ತಿ ದೇಶದ ಏಳ್ಗೆ, ಸಮಾಜದ ಉನ್ನತಿಗಾಗಿ ಶ್ರಮಿಸಿದ ಅಂಬೇಡ್ಕರ್ ಅವರು ಉಜ್ವಲ ಭಾರತದ ಕನಸು ಕಂಡಿದ್ದರು. ಅಸ್ಪೃಶ್ಯತೆಯ ನಿವಾರಣೆ, ಅಸಮಾನತೆಯನ್ನು ತೊಡೆದು ಹಾಕುವುದು, ಎಲ್ಲರಿಗೂ ಶಿಕ್ಷಣ ಹಾಗೂ ಉದ್ಯೋಗದ ಸಮಾನ ಅವಕಾಶಗಳು ಸಿಗಬೇಕು ಎಂಬ ಮಹಾದಾಸೆಯನ್ನು ಅಂಬೇಡ್ಕರ್ ಅವರು ಹೊಂದಿದ್ದರು.

‘ಅದೇ ದಾರಿಯಲ್ಲಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು, ಶಿಕ್ಷಣದಿಂದ ಹಿಡಿದು ಎಲ್ಲ ಕ್ಷೇತ್ರಗಳಲ್ಲಿ ಹಲವು ಜನಪರ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿವೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಬೆಳವಣಿಗೆಯ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಯ ನಿರ್ವಹಿಸುತ್ತಿವೆ’ ಎಂದು ನಾಗೇಶ್ ಹೇಳಿದರು. 

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X