Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಕ್ಕೂರು ವೈಮಾನಿಕ ತರಬೇತಿ ಶಾಲೆ...

ಜಕ್ಕೂರು ವೈಮಾನಿಕ ತರಬೇತಿ ಶಾಲೆ ಕಾರ್ಯಾರಂಭಕ್ಕೆ ದಿನಗಣನೆ ಶುರು: ಸಚಿವ ಡಾ.ನಾರಾಯಣಗೌಡ

"ಟ್ವಿನ್ ಎಂಜಿನ್ ಪರೀಕ್ಷಾರ್ಥ ಹಾರಾಟ ಯಶಸ್ವಿ"

ವಾರ್ತಾಭಾರತಿವಾರ್ತಾಭಾರತಿ8 Dec 2021 12:39 PM IST
share
ಜಕ್ಕೂರು ವೈಮಾನಿಕ ತರಬೇತಿ ಶಾಲೆ ಕಾರ್ಯಾರಂಭಕ್ಕೆ ದಿನಗಣನೆ ಶುರು: ಸಚಿವ ಡಾ.ನಾರಾಯಣಗೌಡ

ಬೆಂಗಳೂರು, ಡಿ.8: ಜಕ್ಕೂರು ಸರಕಾರಿ ವೈಮಾನಿಕ ತರಬೇತಿ ಶಾಲೆ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಈ ನಡುವೆ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿ ನಡೆಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಜಕ್ಕೂರು ವೈಮಾನಿಕ ತರಬೇತಿ ಶಾಲೆಗೆ ಮತ್ತೆ ಕಾಯಕಲ್ಪ ನೀಡುತ್ತಿರುವ ಸಚಿವರು, ತಮ್ಮ ಕನಸಿನ ಸಾಕಾರಕ್ಕೆ ಅಧಿಕಾರಗಳ ಜೊತೆ ನಿರಂತರ ಸಭೆ ನಡೆಸಿ ರನ್‌ ವೇ, ದುರಸ್ಥಿ ಸೇರಿದಂತೆ ಪುನರಾಂಭಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದರು. ಅದರಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ರನ್ ವೇ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದೀಗ ತರಬೇತಿ ಶಾಲೆ ಆರಂಭಕ್ಕೆ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ವೈಮಾನಿಕ ಶಾಲೆ ಆರಂಭಕ್ಕೂ ಮುನ್ನ ವಿಮಾನ ಹಾರಾಟದ ಪರೀಕ್ಷೆ ನಡೆಸಲಾಗಿದೆ.

ಇತ್ತೀಚೆಗಷ್ಟೇ ಟ್ವಿನ್ ಇಂಜಿನ್ ವಿಮಾನ ಪರೀಕ್ಷಾರ್ಥ ಹಾರಾಟ ನಡೆಸಿದ್ದು ಯಶಸ್ವಿಯಾಗಿದೆ. ಡಿಜಿಸಿಎ ಅನುಮೋದನೆ ಪಡೆದು ಜಕ್ಕೂರು ವೈಮಾನಿಕ ತರಬೇತಿ ಶಾಲೆ ಮುಖ್ಯ ಬೋಧಕ ಕ್ಯಾ.ಕಮಲ್ ಕಿಶೋರ್ ಮತ್ತು ನಾಗಪುರ ಏವಿಯೇಷನ್‌ ಡೆಪ್ಯುಟಿ ಮುಖ್ಯ ಬೋಧಕ ಕ್ಯಾ.ಎಜಿಲರಸನ್ ಟ್ವಿನ್‌‌ ಎಂಜಿನ್ ವಿಮಾನದ ಪರೀಕ್ಷಾರ್ಥ ಹಾರಾಟ ನಡೆಸಿದ್ದಾರೆ.

ವೈಮಾನಿಕ ತರಬೇತಿ ಶಾಲೆಯಲ್ಲಿ ಟ್ವಿನ್ ಎಂಜಿನ್ ಮಹತ್ವ ಏನು?

ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ಡಿಜಿಸಿಎ ನಿಯಮಾವಳಿ ಪ್ರಕಾರ ವಾಣಿಜ್ಯ ಪೈಲಟ್ ಲೈಸೆನ್ಸ್ ಪಡೆಯಲು 200 ಗಂಟೆಗಳ ಹಾರಾಟ ತರಬೇತಿ ಪೂರ್ಣಗೊಳಿಸಿರಬೇಕು. ಇದರಲ್ಲಿ 185 ತಾಸು ಸಿಂಗಲ್ ಎಂಜಿನ್ ಹಾಗೂ 15 ತಾಸು ಟ್ವಿನ್ ಎಂಜಿನ್‌ ಮಿಮಾನದಲ್ಲಿ ತರಬೇತಿ ನೀಡಲಾಗುತ್ತದೆ. ಈ ಹಿಂದೆ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ಟ್ವಿನ್ ಎಂಜಿನ್ ವಿಮಾನ ಇಲ್ಲದ ಕಾರಣಕ್ಕೆ 185 ತಾಸುಗಳ ಸಿಂಗಲ್ ಎಂಜಿನ್ ತರಬೇತಿ ನೀಡಿ, ಉಳಿದ 15 ತಾಸಿನ ಟ್ವಿನ್ ಎಂಜಿನ್ ವಿಮಾನ ಹಾರಾಟ ತರಬೇತಿಗೆ ಬೇರೆ ರಾಜ್ಯಗಳಿಗೆ ಹೋಗಬೇಕಾಗಿತ್ತು. ಇದು ಕರ್ನಾಟಕದ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗುತ್ತಿತ್ತು. ಇದನ್ನು ಮನಗಂಡು ಜಕ್ಕೂರು  ಸರ್ಕಾರಿ ವೈಮಾನಿಕ ಶಾಲೆಗೆ 5 ಕೋಟಿ ವೆಚ್ಚದಲ್ಲಿ ಟ್ವಿನ್ ಎಂಜಿನ್ ವಿಮಾನ ಖರೀದಿಸಲಾಗಿದೆ.  ಇದರಿಂದಾಗಿ ವಿದ್ಯಾರ್ಥಿಗಳು 185 ತಾಸು ಸಿಂಗಲ್ ಎಂಜಿನ್ ಮತ್ತು 15 ತಾಸು ಟ್ವಿನ್ ಎಂಜಿನ್ ಹಾರಾಟ ತರಬೇತಿಯನ್ನು ಹೆಚ್ಚಿನ ಹೊರೆಯಾಗದೇ ಇಲ್ಲೇ ಪಡೆಯಲು ಅನುಕೂಲವಾಗಲಿದೆ.

ಜಕ್ಕೂರು ಸರಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ 5 ಸಿಂಗಲ್ ಎಂಜಿನ್ ವಿಮಾನಗಳಿದ್ದು, ಹೊಸದಾಗಿ ಒಂದು ಟ್ವಿನ್ ಎಂಜಿನ್ ವಿಮಾನ ಖರೀದಿಸಿ ತರಬೇತಿಗೆ ಒದಗಿಸಲಾಗಿದೆ. ಟ್ವಿನ್ ಎಂಜಿನ್ ವಿಮಾನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದ್ದು, ವೈಮಾನಿಕ ತರಬೇತಿ ಶಾಲೆ ಉದ್ಘಾಟನೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಡಿಜಿಸಿಎ Flying Training organization approval  ನೀಡಿದ ತಕ್ಷಣವೇ ತರಬೇತಿಯನ್ನು ಆರಂಭಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X