ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್ ಪತನ: ಮೃತಪಟ್ಟವರ ಸಂಖ್ಯೆ 13ಕ್ಕೇರಿಕೆ

ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್, ಅವರ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರು ಸಹಿತ 14 ಜನರನ್ನು ಹೊತ್ತ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದ್ದು, 14 ಜನರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಮೃತದೇಹಗಳ ಗುರುತುಗಳನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಖಚಿತಪಡಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಸೂಲೂರಿನ ಸೇನಾ ನೆಲೆಯಿಂದ ಮಿ-ಸಿರೀಸ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ನೀಲಗಿರಿಯಲ್ಲಿ ಈ ಅಪಘಾತ ಸಂಭವಿಸಿದೆ.
Next Story