ಜನರಲ್ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು, ಡಿ.8: ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಹಾಗೂ ದುರದೃಷ್ಟಕರ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಕಲ್ಪಿಸಲಿ. ಅವರ ಕುಟುಂಬದವರಿಗೆ ಈ ಆಘಾತವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story





