Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಸುಳ್ಳು ಸ್ಲೋಗನ್’ಗಳ ಸೃಷ್ಟಿಕರ್ತ, ಜಾತಿ...

‘ಸುಳ್ಳು ಸ್ಲೋಗನ್’ಗಳ ಸೃಷ್ಟಿಕರ್ತ, ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ: ಎಚ್‍ಡಿಕೆ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ8 Dec 2021 7:28 PM IST
share
‘ಸುಳ್ಳು ಸ್ಲೋಗನ್’ಗಳ ಸೃಷ್ಟಿಕರ್ತ, ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ: ಎಚ್‍ಡಿಕೆ ವಾಗ್ದಾಳಿ

ಬೆಂಗಳೂರು, ಡಿ.8: ‘ಸುಳ್ಳು ಸ್ಲೋಗನ್’ಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ಧಕಲೆಯ ನಿಪುಣಾಗ್ರೇಸರು ಈಗ ‘ಜೆಡಿಎಫ್’ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ‘ಜಾತಿ ಸಹಕಾರ’ಕ್ಕೆ ಮೊರೆ ಹೋಗಿದ್ದಾರೆ.! ಅಯ್ಯೋ, ಎಂಥಾ ದುರ್ವಿಧಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಮತಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಭೂತಾಗಿ ನಡೆಯುತ್ತಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಟೀಕಿಸಿದ್ದಾರೆ.

ಅವರಿಗೆ ಜೆಡಿಎಸ್ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್ ಚಳಿ-ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಸಿದ್ದಸೂತ್ರದಾರ ಬಳಸುವ ಹೊಸ ಔಷಧವೇ ‘ಜೆಡಿಎಫ್’ . ಅವರನ್ನು ಉಳಿಸುವ ಟಾನಿಕ್‍ನ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ. ಹಾಗಾದರೆ, ಅವರದ್ದು ಎಸ್‍ಸಿಎಫ್(ಸಿದ್ದಸೂತ್ರದಾರ ಕಾಂಗ್ರೆಸ್ ಫ್ಯಾಮಿಲಿ) ಅಲ್ಲವೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಜೆಡಿಎಸ್, ಬಿಜೆಪಿಯ ‘ಬಿ’ ಟೀಂ ಎಂದು ಭಜನೆ ಮಾಡುವವರು, ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್ ಕೊಟ್ಟಿದ್ದರ ಒಳಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ? ಎಂದು ಅವರು ಪ್ರಶ್ನಿಸಿದ್ದಾರೆ.

ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ‘ಸಂದೇಶ ಸನ್ನಿದಿ’ಯಲ್ಲಿ ಕೂತು ಕಾಂಗ್ರೆಸ್ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‍ಗಲ್ಲ ಎಂದು ಫರ್ಮಾನು ಹೊರಡಿಸಿದ ‘ಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತ’ ಸುಳ್ಳು ಸ್ಲೋಗನ್‍ಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ‘ವಿನಾಶಕಾಲೇ ವಿಪರೀತ ಸುಳ್ಳು’. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ʼಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ. 1/6

— H D Kumaraswamy (@hd_kumaraswamy) December 8, 2021

ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ. 5/6

— H D Kumaraswamy (@hd_kumaraswamy) December 8, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X