Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದಿಗಳೊಂದಿಗೆ ಸೇರುವಂತೆ ಅಂಬೇಡ್ಕರ್...

ಕೋಮುವಾದಿಗಳೊಂದಿಗೆ ಸೇರುವಂತೆ ಅಂಬೇಡ್ಕರ್ ಹೇಳಿದ್ದರಾ?: ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಸಿದ್ದರಾಮಯ್ಯ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ8 Dec 2021 8:11 PM IST
share
ಕೋಮುವಾದಿಗಳೊಂದಿಗೆ ಸೇರುವಂತೆ ಅಂಬೇಡ್ಕರ್ ಹೇಳಿದ್ದರಾ?: ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು,ಡಿ.8: ನನ್ನ ಟೀಕಿಸುವ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ನೈತಿಕತೆ ಇಲ್ಲ. ಕೋಮುವಾದಿಗಳೊಂದಿಗೆ ಸೇರುವಂತೆ ಅಂಬೇಡ್ಕರ್ ಹೇಳಿದ್ದರಾ? ಜೆಡಿಯು, ಲೋಕಶಕ್ತಿ, ಜೆಡಿಎಸ್, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ಅವರಿಂದ ನಾನು ಪಾಠ ಕಲಿಯಬೇಕಿಲ್ಲ. ಅವರ ಆರೋಗ್ಯ ಸುಧಾರಿಸಲೆಂದು ಹಾರೈಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ನಗರದ ತಮ್ಮ ನಿವಾಸದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಅಭಿವೃದ್ಧಿಗಾಗಿ ಓಟು ಕೊಡಿ ಎನ್ನುವ ಬಿಜೆಪಿ ಮಂತ್ರಿಗಳ ಹೆಳೀಕೆ ನೋಡಿದರೆ ನಾಚಿಕೆಯಾಗುತ್ತದೆ. ಯಾವ ಅಭಿವೃದ್ಧಿ ಮಾಡಿದ್ದಾರೆ ಎಂದು ಇವರಿಗೆ ಮತ ನೀಡಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಅಭಿವೃದ್ಧಿಗಾಗಿ ಮತ ನೀಡಿ ಎಂದು ಹೇಳುವ ಬಿಜೆಪಿ ಸಚಿವರ ಮಾತುಗಳನ್ನು ಕೇಳಿದರೆ ನಾಚಿಕೆಯಾಗುತ್ತದೆ. 3 ತಿಂಗಳು ಕಳೆದರೂ ಎನ್‍ಆರ್ ಇಜಿ ಹಣ ಬಂದಿಲ್ಲ, ಅತೀವೃಷ್ಟಿ ಅನಾವೃಷ್ಟಿ ಸಂಭವಿಸಿದ್ದರೂ ಒಂದು ರೂಪಾಯಿ ಪರಿಹಾರ ನೀಡಿಲ್ಲ, 6 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಉಂಟಾಗಿದ್ದರೂ ಇದರ ಸಮೀಕ್ಷೆಯನ್ನು ಮಾಡಿಲ್ಲ, ಇವರ ಅಧಿಕಾರವಧಿಯಲ್ಲಿ ಬಡವರಿಗೆ ಒಂದು ಮನೆಯನ್ನು ನೀಡಿಲ್ಲ, ಅದೇಗೆ ಅಭಿವೃದ್ಧಿಗಾಗಿ ಓಟು ಕೊಡಿ ಎಂದು ಕೇಳುತ್ತಾರೊ ಗೊತ್ತಿಲ್ಲ, ಇವರ ಮಾತುಗಳನ್ನು ಕೇಳಿದರೆ ನಾಚಿಕೆಯಾಗುತ್ತದೆ ಎಂದು ಹರಿಹಾಯ್ದರು.

ಬಿಜೆಪಿ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಹಿಂದುಳಿದ ವರ್ಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ, ಕಾಂಗ್ರೆಸ್ ಪಕ್ಷಕ್ಕೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇದೆ. ಬಿಜೆಪಿ ಇದಕ್ಕೆ ವಿರುದ್ಧವಾಗಿದೆ. ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ, ಹಾಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೊಡುಗೆ ಏನು ಎಂಬುದನ್ನು ತಿಳಿಸಲಿ ಎಂದರು.  

ರಾಜೀವ್ ಗಾಂಧಿ ಅವರು 73 ಮತ್ತು 74ನೇ ವಿಧಿಗಳಿಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಮೀಸಲಾತಿ ನೀಡಿದರು. ಹಿಂದುಳಿದ ವರ್ಗಗಳಿಗೆ ಶೇ. 31, ದಲಿತರಿಗೆ ಶೇ. 18 ಮೀಸಲಾತಿ ಕೊಟ್ಟದ್ದು ಕಾಂಗ್ರೆಸ್ ಎಂದರು. 

ಮನಮೋಹನ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿದ್ದಾಗ ನರೇಗಾ ತಂದರು. ಆಹಾರ ರಕ್ಷಣೆ ಕಾಯಿದೆ, ಮಾಹಿತಿ ಹಕ್ಕು, ಕಡ್ಡಾಯ ಶಿಕ್ಷಣ ಕಾಯಿದೆಗಳನ್ನು ಜಾರಿಗೊಳಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕೊಡುವುದು ಅಸಂವಿಧಾನಿಕ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ರಾಮ ಜೋಯಿಸರು ಸುಪ್ರೀಂಕೋರ್ಟಿನಲ್ಲಿ ದಾವೆ ಹೂಡಿದ್ದರು. ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಅವರ ಕೊಡುಗೆ ಶೂನ್ಯ ಎಂದು ಕುಟುಕಿದರು. 

ಸೋಲುವ ಭಯದಿಂದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಮುಂದೂಡಿದ್ದಾರೆ. ಹೈಕೋರ್ಟ್‍ನಲ್ಲಿ ಪ್ರಕರಣವಿರುವ ನೆಪದಿಂದ ಜಿಪಂ, ತಾಪಂ ಸದಸ್ಯರು ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡದಂತೆ ಮಾಡಿದ್ದಾರೆ. ಈ ಎಲ್ಲ ಅಂಶಗಳನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. 
  
5 ವರ್ಷಗಳ ನನ್ನ ಆಡಳಿತದಲ್ಲಿ ವರ್ಷಕ್ಕೆ 3 ಲಕ್ಷದಂತೆ 15 ಲಕ್ಷ ಮನೆ ನೀಡಿz್ದÉ. ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ 3.5 ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಮನೆ ಕೊಟ್ಟಿಲ್ಲ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದೆ. ಅವರಿಗೆ ಧಮ್ಮಿಲ್ಲ. ಆದರೂ ಅಭಿವೃದ್ಧಿಗೆ ಮತಕೊಡುವಂತೆ ನಾಚಿಕೆ ಇಲ್ಲದೇ ಕೇಳುತ್ತಾರೆ ಎಂದರು. 

ರಾಜ್ಯದಲ್ಲಿ ಪ್ರವಾಹ ಬಂತು. ಅತಿವೃಷ್ಟಿಯಾಯಿತು. 6 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಯಿತು. 1 ರೂಪಾಯಿ ಪರಿಹಾರ ಕೊಟ್ಟಿಲ್ಲ. ಸರ್ವೇ ಮಾಡಿಸಿಲ್ಲ. ಕೊರೊನಾದಿಂದ ರಾಜ್ಯದಲ್ಲಿ 4 ಲಕ್ಷ ಜನರು ಮೃತಪಟ್ಟರು. ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಕೊಟ್ಟಿಲ್ಲ. ವೈದ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ದುಡ್ಡಿಲ್ಲ, ಖಜಾನೆ ಖಾಲಿ ಎನ್ನುತ್ತಿದ್ದಾರೆ ಎಂದು ತಿಳಿಸಿದರು. 

ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಕಂಟ್ರಾಕ್ಟರ್ ಸಂಘದ ಕೆಂಪಣ್ಣ ಅವರು 6-7-2021ರಲ್ಲಿ ಲಿಖಿತವಾಗಿ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಗುತ್ತಿಗೆದಾರರ ಬಳಿ ಶೇ. 40 ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ತಿನ್ನುವುದಿಲ್ಲ. ತಿನ್ನಲು ಬಿಡುವುದಿಲ್ಲ ಎನ್ನುತ್ತಿದ್ದ ಪ್ರಧಾನಿಯವರು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು. 

ರಾಜ್ಯ ವಾರ್ಷಿಕ ಬಜೆಟ್ 2 ಲಕ್ಷ 47 ಸಾವಿರ ಕೋಟಿ, ಇದರಲ್ಲಿ 1.5 ಲಕ್ಷ ಕೋಟಿ ಸಂಬಳ, ಪಿಂಚಣಿಗೆ ಹೋಗುತ್ತಿದೆ. ಉಳಿದ 1 ಲಕ್ಷ ಹಣದಲ್ಲಿ 70 ಲಕ್ಷ ಕೋಟಿ ಲಂಚಕ್ಕೆ ಹೋದರೆ? ರಾಜ್ಯಕ್ಕೆ ಏನ್ ಉಳಿಯಿತು. ಅಭಿವೃದ್ಧಿ ಏನಾಯಿತು? ಇವರೇ ಮುಂದುವರಿದರೆ ಸಂಬಳ ಕೊಡಲು ದುಡ್ಡು ಇರುವುದಿಲ್ಲ. ಇದು ಕೆಟ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸ್ವಾತಂತ್ರ್ಯ ಬಂದಾಗಿಂದ 2014ರ ತನಕ ದೇಶದ ಒಟ್ಟು ಸಾಲ 51 ಲಕ್ಷದ 33 ಸಾವಿರ ಕೋಟಿ ಇತ್ತು. ಈಗ ಒಟ್ಟು ಸಾಲ 135 ಲಕ್ಷ ಕೋಟಿ, 8 ವರ್ಷಗಳಲ್ಲಿ 82 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದನ್ನು ಅದಕ್ಷತೆನಾ, ಏನಂಥ ಹೇಳಬೇಕು? ತೈಲಬೆಲೆ ಹೆಚ್ಚಾಗಿದೆ. ಪಿಎಂ ಕೇರ್ಸ್ ಫಂಡ್ ಏನಾಯಿತು? ನಿರುದ್ಯೋಗ ಸಮಸ್ಯೆ ಯಾಕೇ ಹೆಚ್ಚಾಗಿದೆ? ಇವುಗಳ ಬಗ್ಗೆ ವಿತ್ತ ಸಚಿವರು ಉತ್ತರ ನೀಡಬೇಕು ಎಂದರು. 

ವ್ಯಕ್ತಿಯ ಹೊಣೆಗಾರಿಕೆ ಕಾಯಿದೆ ಇದೆ. ಅದರ ಅನುಸಾರ ನಾನು ಆಡಳಿತ ನಡೆಸಿದ್ದೇನೆ. ಜಿಡಿಪಿಯ ಶೇ. 25ಕ್ಕಿಂತ ಹೆಚ್ಚು ಸಾಲ ಮಾಡಬಾರದೆಂದು ಕಾಯಿದೆಯಲ್ಲಿ ಹೇಳಿದೆ. ಅದರ ಅನುಸಾರವೇ ಆಡಳಿತ ನಡೆಸಿರುವೆ. ಇವತ್ತಿನ ಬಿಜೆಪಿ ಸರ್ಕಾರ ಯಾವ ಆಧಾರದಲ್ಲಿ ಆಡಳಿತ ನಡೆಸುತ್ತಿದೆ ಎಂಬುದನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದರು.

ಕುಮಾರಸ್ವಾಮಿ ಸೇರಿ ಯಾರ ಬಗ್ಗೆ ದ್ವೇಷ ಇಲ್ಲ. ರಾಜ್ಯದ ಸಮಸ್ಯೆಗಳ ಮೇಲೆ ರಾಜಕೀಯ ಮಾಡಬೇಕು. ಸಿದ್ಧಾಂತದ ಮೇಲೆ ಭಿನ್ನಾಭಿಪ್ರಾಯ ಇರುತ್ತೆ. ಒಂದು ಕಡೆ ಕುಮಾರಸ್ವಾಮಿ ಆರೆಸ್ಸೆಸ್ ಬೈಯುವುದು, ಬಿಜೆಪಿಯೊಂದಿಗೆ ಸೇರಿ ಆಡಳಿತ ನಡೆಸುವುದು. ಜಾತ್ಯಾತೀತ ಪಕ್ಷದವರು ಕೋಮುವಾದಿಗಳೊಂದಿಗೆ ಸೇರಬಹುದೆ ಎಂದು ಪ್ರಶ್ನಿಸಿದರು. 

ಮೇಲ್ಮನೆಯ 75 ಸ್ಥಾನಗಳಲ್ಲಿ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದೇವೆ. ಟಿಕೆಟ್ ಹಂಚಿಕೆಯಲ್ಲಿ ಮಹಿಳೆಯರು ಸೇರಿ ಸಾಮಾಜಿಕ ನ್ಯಾಯ ಪಾಲನೆ ಮಾಡಿದ್ದೇವೆ. ಮೈಸೂರು ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಅಭ್ಯರ್ಥಿಯಾಗಿರುವ ಡಾ.ಡಿ.ತಿಮ್ಮಯ್ಯ ಅವರಿಗೆ ಮೊದಲ ಪ್ರಾಶಸ್ತ್ಯದ ಮತಕೊಟ್ಟು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‍ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಬಸವರಾಜು, ಡಿ.ರವಿಶಂಕರ್, ಕೆ.ಮರೀಗೌಡ, ಎಂ.ಲಕ್ಷ್ಮಣ್, ಗೋಪಿ, ಕೆ.ಎಸ್.ಶಿವರಾಮ್ ಮುಂತಾದವರು ಭಾಗವಹಿಸಿದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X