Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್...

ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್ ಆರಂಭಕ್ಕೆ ಫ್ರಾನ್ಸ್ ಒಲವು: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ8 Dec 2021 9:49 PM IST
share
ರಾಜ್ಯದಲ್ಲಿ ಶೈಕ್ಷಣಿಕ ಕ್ಯಾಂಪಸ್ ಆರಂಭಕ್ಕೆ ಫ್ರಾನ್ಸ್ ಒಲವು: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು, ಡಿ.8: ಫ್ರಾನ್ಸ್ ಸರಕಾರವು ರಾಜ್ಯದಲ್ಲಿ ಇಂಡೋ-ಫ್ರೆಂಚ್ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲು ಉತ್ಸುಕವಾಗಿದ್ದು, ಆರೋಗ್ಯ, ಇಂಡಸ್ಟ್ರಿ 4.0 ಮತ್ತು ಪರಿಸರ ವಿಜ್ಞಾನಕ್ಕೆ ಸಂಬಂಧಿಸಿದ ಅವಳಿ ಪದವಿ ನೀಡಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಭಾರತದಲ್ಲಿ ಫ್ರಾನ್ಸ್ ದೇಶದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ಥಿಯರಿ ಬರ್ತೆಲೋಟ್ ಅವರು ಬುಧವಾರ ವಿಕಾಸಸೌಧದಲ್ಲಿ ತಮ್ಮನ್ನು ಭೇಟಿಯಾದಾಗ ಈ ಸಂಬಂಧ ಅವರು ಮಾತುಕತೆ ನಡೆಸಿದರು. ಈ ಕ್ಯಾಂಪಸ್ಸನ್ನು ಆರಂಭಿಸಲು ಬೆಂಗಳೂರು ನಗರ ವಿಶ್ವವಿದ್ಯಾಲಯವು ಸೂಕ್ತವಾಗಿದೆ ಎಂದು ಫ್ರೆಂಚ್ ನಿಯೋಗಕ್ಕೆ ತಿಳಿಸಲಾಗಿದೆ ಎಂದರು.

ನಂತರ ಮಾತನಾಡಿದ ಅಶ್ವತ್ಥ ನಾರಾಯಣ, ಆರೋಗ್ಯ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಔಷಧಗಳು ಮತ್ತು ಆರೋಗ್ಯ ಉತ್ಪನ್ನಗಳು, ಔಷಧ ವಿಜ್ಞಾನ ನಿರ್ವಹಣೆ, ಸುಧಾರಿತ ಫಾರ್ಮಸುಟಿಕಲ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ, ಇಂಡಸ್ಟ್ರಿ 4.0 ಅಡಿಯಲ್ಲಿ ಸೈಬರ್ ಸೆಕ್ಯುರಿಟಿ, ಡೇಟಾ ಅನಲಿಟಿಕ್ಸ್, ಮಶೀನ್ ಲರ್ನಿಂಗ್ ಮುಂತಾದ ವಿಭಾಗಗಳಲ್ಲಿ ಮತ್ತು ಪರಿಸರ ಶಾಸ್ತ್ರದಲ್ಲಿ ಜೀವವೈವಿಧ್ಯ, ಹವಾಮಾನ ಬದಲಾವಣೆ, ಪರಿಸರಸ್ನೇಹಿ ಆರ್ಥಿಕತೆ ವಿಭಾಗಗಳಲ್ಲಿ ಉದ್ದೇಶಿತ ಕ್ಯಾಂಪಸ್ಸಿನಲ್ಲಿ ಅವಳಿ ಪದವಿ(ಇಂಡೋ-ಫ್ರೆಂಚ್ ಡಿಗ್ರಿ)ಗಳನ್ನು ನೀಡಲಾಗುವುದು ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ ಇಂಡೋ-ಫ್ರೆಂಚ್ ಸಹಯೋಗದ ಕ್ಯಾಂಪಸ್ಸಿನಲ್ಲಿ ಪಠ್ಯಕ್ರಮ ಇತ್ಯಾದಿಗಳನ್ನು ಕೈಗಾರಿಕೆಗಳಿಗೆ ಇರುವ ಅಗತ್ಯದಂತೆ ರೂಪಿಸಲಾಗುವುದು. ಜತೆಗೆ ಸಂಶೋಧನಾ ಸಂಸ್ಥೆ ಮತ್ತು ಇನ್ಕ್ಯುಬೇಟರುಗಳನ್ನು ಸ್ಥಾಪಿಸಲು ಒತ್ತು ಕೊಡಲಾಗುವುದು. ಈ ಮೂಲಕ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಕೌಶಲ್ಯಗಳನ್ನು ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣದಲ್ಲಿ ಜಾಗತಿಕ ಗುಣಮಟ್ಟಕ್ಕೆ ಆದ್ಯತೆ ಕೊಡಲಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಪದವೀಧರರಾದರೆ ಸಾಲದು, ಅವರು ಸಮಕಾಲೀನ ವೃತ್ತಿಗಳಿಗೆ ಬೇಕಾದ ಅತ್ಯಾಧುನಿಕ ಕೌಶಲ್ಯಗಳನ್ನು ಕೂಡ ಕಲಿಸಲಾಗುವುದು. ಈ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವತ್ತ ದಾಪುಗಾಲಿಡಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಉದ್ಯೋಗದಾತ ಕಂಪನಿಗಳ ಅಗತ್ಯ ಮತ್ತು ಬೇಡಿಕೆಯನ್ನು ಬೆರಳತುದಿಯಲ್ಲಿ ತಿಳಿದುಕೊಳ್ಳಲೆಂದೇ ಕೈಗಾರಿಕೆಗಳನ್ನು ಶಿಕ್ಷಣ ಸಂಸ್ಥೆಗಳೊಂದಿಗೆ ಬೆಸೆಯಲಾಗುತ್ತಿದೆ. ಇನ್ನುಮುಂದೆ ಶೈಕ್ಷಣಿಕ ವರ್ಷವಿಡೀ ಈ ಕಂಪನಿಗಳು ಶಿಕ್ಷಣ ಸಂಸ್ಥೆಗಳೊಂದಿಗೆ ಸಕ್ರಿಯ ಸಂಬಂಧ ಹೊಂದಿರಲಿದೆ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X