ಸೇನಾ ಹೆಲಿಕಾಪ್ಟರ್ ದುರಂತ; ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ಸಂತಾಪ
ಮಂಗಳೂರು : ತಮಿಳುನಾಡಿನ ಊಟಿ ಕೂನೂರ್ ಸಮೀಪ ಇಂದು ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿ ಮೃತಪಟ್ಟಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟ ಸಂತಾಪ ಸೂಚಿಸಿದೆ.
ಇವರ ಅಕಾಲಿಕ ಅಗಲಿಕೆ ದೇಶಕ್ಕೆ ಅಪಾರ ನಷ್ಟ ಉಂಟು ಮಾಡಿದ್ದು, ರಾಜ್ಯ ಒಕ್ಕೂಟ ಸಂತಾಪ ಸೂಚಿಸುತ್ತದೆ ಎಂದು ರಾಜ್ಯಾಧ್ಯಕ್ಷ ಎಸ್ ಬಿ ದಾರಿಮಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





