ಉಡುಪಿ: ಆರು ಮಂದಿ ಕೋವಿಡ್ಗೆ ಪಾಸಿಟಿವ್
![ಉಡುಪಿ: ಆರು ಮಂದಿ ಕೋವಿಡ್ಗೆ ಪಾಸಿಟಿವ್ ಉಡುಪಿ: ಆರು ಮಂದಿ ಕೋವಿಡ್ಗೆ ಪಾಸಿಟಿವ್](https://www.varthabharati.in/sites/default/files/images/articles/2021/12/9/317011-1639059822.jpg)
ಉಡುಪಿ, ಡಿ.9: ಜಿಲ್ಲೆಯಲ್ಲಿ ಇಂದು ಆರು ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ ಏಳು ಮಂದಿ ಕೋವಿಡ್ನಿಂದ ಚೇತರಿಸಿ ಕೊಂಡಿದ್ದರೆ, ಇನ್ನೂ ಚಿಕಿತ್ಸೆಯಲ್ಲಿರುವವರ ಸಂಖ್ಯೆ 63 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ ಆರು ಮಂದಿಯಲ್ಲಿ ನಾಲ್ವರು ಪುರುಷರು ಹಾಗೂ ಇಬ್ಬರು ಮಹಿಳೆಯರಾಗಿದ್ದಾರೆ. ಎಲ್ಲರೂ ಉಡುಪಿ ತಾಲೂಕಿನವರು. ದಿನದಲ್ಲಿ ಪಾಸಿಟಿವ್ ಬಂದ ಎಲ್ಲಾ ಆರು ಮಂದಿಗೆ ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ ಸೋಂಕಿನಿಂದ ಏಳು ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಕೊರೋನದಿಂದ ಚೇತರಿಸಿಕೊಂಡ ವರ ಸಂಖ್ಯೆ 76,411ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4710 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,951ಕ್ಕೇರಿದೆ.
4,666 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 4,666 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 946 ಮಂದಿ ಮೊದಲ ಡೋಸ್ ಹಾಗೂ 3720 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 617 ಮಂದಿ ಮೊದಲ ಡೋಸ್ ಹಾಗೂ 2618 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 329 ಮಂದಿ ಮೊದಲ ಡೋಸ್ ಹಾಗೂ 1096 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.