Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು...

ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಬೇಕು: ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ9 Dec 2021 8:53 PM IST
share
ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕನ್ನು ಎದುರಿಸಲು ಸಹಕರಿಸಬೇಕು: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ಡಿ.9: ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕನ್ನು ಎದುರಿಸಲು ಸರಕಾರಿ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆಗಳನ್ನು ನೀಡಿದ್ದಾರೆ.

ಗುರುವಾರ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕೋವಿಡ್-19ರ ಕಳೆದೆರಡು ಅಲೆಗಳಲ್ಲಿ ಸರಕಾರದ ಜೊತೆಗೆ ಖಾಸಗಿ ಆಸ್ಪತ್ರೆಗಳು ಅತ್ಯುತ್ತಮ ರೀತಿಯಲ್ಲಿ ಸ್ಪಂದಿಸಿ, ಸೋಂಕಿತರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡಿದ್ದು, ಎಲ್ಲಾ ರೀತಿಯ ಸಹಕಾರವನ್ನೂ ನೀಡಿವೆ. ಮುಂಬರುವ ದಿನಗಳಲ್ಲಿ ಇದೇ ರೀತಿಯ ಸಹಕಾರವನ್ನು ನೀಡುವ ಮೂಲಕ ಮುಂದಿನ ದಿನಗಳಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದವರು ಹೇಳಿದರು.

ಆಯುಷ್ಮಾನ್‌ನಲ್ಲಿ ಚಿಕಿತ್ಸೆ: ಆಯುಷ್ಮಾನ ಆರೋಗ್ಯ ಭಾರತ್ ಯೋಜನೆ ಯಡಿಯಲ್ಲಿ 5000ಕ್ಕೂ ಹೆಚ್ಚು ಕೋವಿಡ್ ಸೋಂಕಿತರಿಗೆ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳು ನೀಡಿರುವುದು ಪ್ರಶಂಸನೀಯ ಕಾರ್ಯ ಎಂದ ಅವರು, ಸರಕಾರದಿಂದ ಚಿಕಿತ್ಸೆಯ ವೆಚ್ಚವನ್ನು ಆದ್ಯತೆ ಮೇಲೆ ಭರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಖಾಸಗಿ ಆಸ್ಪತ್ರೆಗಳು ಸಂಭಾವ್ಯ ಕೋವಿಡ್ ಸೋಂಕನ್ನು ಎದುರಿಸಲು ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು. 2ನೇ ಅಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಿದ್ದ ಪ್ರಾಣವಾಯುವಿನ ಸಮಸ್ಯೆ ರಾಜ್ಯದಲ್ಲಿ ಉಂಟಾಗಿದ್ದ ಹಿನ್ನೆಲೆ, ಆಕ್ಸಿಜನ್ ಸಂಗ್ರಹ ಮಾಡುವ ಜಂಬೋ ಸಿಲೆಂಡರ್, ಡ್ಯುರೋ ಸಿಲೆಂಡರ್‌ಗಳನ್ನು ಅವಶ್ಯಕತೆಗೆ ತಕ್ಕಂತೆ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಶೇ.95ರಷ್ಟು ಜನ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದಾರೆ. ಶೇ.5ರಷ್ಟು ಇತರೆ ಸಾಮಾನ್ಯ ಕಾಯಿಲೆಯವರು, ಗರ್ಭಿಣಿಯರು ಸೇರಿದಂತೆ ಮತ್ತಿತರರು ಲಸಿಕೆ ಪಡೆಯದೇ ಇರುವುದು ಕಂಡು ಬಂದಿದೆ. ಅವರಿಗೆ ಲಸಿಕೆ ಪಡೆಯಲು ವೈದ್ಯರುಗಳು ಶಿಫಾರಸು ಮಾಡಬೇಕೆಂದು ಕೂರ್ಮಾರಾವ್ ಸೂಚನೆ ನೀಡಿದರು.

ಕೋವಿಡ್ ಸೋಂಕಿಗೆ ಚಿಕಿತ್ಸೆ, ಆಕ್ಸಿಜಿನ್ ಬಳಕೆ ಸೇರಿದಂತೆ ಅಗತ್ಯವಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರಿಗೆ ತರಬೇತಿ ಕಾರ್ಯಗಾರಗಳನ್ನು ಕೆಎಂಸಿಸಹಕಾರದೊಂದಿಗೆ ಆಯೋಜಿಸಬೇಕೆಂದು ಅವರು ಸೂಚಿಸಿದರು.

ಜಿಲ್ಲೆಯ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗುವಾಗ ನಮೂದಿಸಿರುವ ಬೆಡ್‌ಗಳ ಸಂಖ್ಯೆ ಸೇರಿದಂತೆ ಮತ್ತಿತರೆ ಮಾರ್ಪಾಡು ಮಾಡಿರುವ ಅಗತ್ಯ ಮಾಹಿತಿಗಳನ್ನು ಕೂಡಲೇ ಪ್ರಾಧಿಕಾರಕ್ಕೆ ನೀಡಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಎಲ್ಲಾ ಖಾಸಗಿ ಅಸ್ಪತ್ರೆಗಳ ವೈದ್ಯರು ತಮ್ಮಲ್ಲಿಗೆ ಬರುವ ಜ್ವರ ಶೀತ ಕೆಮ್ಮು ಪ್ರಕರಣಗಳ ರೋಗಿಗಳಿಗೆ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಬೇಕು. ಎಲ್ಲಾ ವೈದ್ಯಕೀಯ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಪರಿಶೀಲಿಸಿಕೊಳ್ಳಬೇಕು. ಅಗ್ನಿ ಸುರಕ್ಷಾ ಉಪಕರಣಗಳು ಸೇರಿದಂತೆ ಮತ್ತಿತರ ಮುಂಜಾಗ್ರತಾ ಕ್ರಮಗಳ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಡಿಎಚ್‌ಓ ಡಾ. ನಾಗಭೂಷಣ ಉಡುಪ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಶ್ರೀರಾಮರಾವ್ ಹಾಗೂ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಖಾಸಗಿ ಅಸ್ಪತ್ರೆಗಳಿಗೆ ನಿಯೋಜಿಸಿದ್ದ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X