ಮಂಗಳೂರು ವಿವಿ; ಸ್ನಾತಕೋತ್ತರ ಪದವಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಮಂಗಳೂರು, ಡಿ.9: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳು/ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು/ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು/ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳಲ್ಲಿ ನಡೆಸಲ್ಪಡುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕಾರ್ಯ ಕ್ರಮಗಳ ಪ್ರವೇಶಾತಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಡಿ.24ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.mangaloreuniversity.ac.in ನಲ್ಲಿ ಪಡೆಯಬಹುದು ಎಂದು ಕುಲಸಚಿವರ ಪ್ರಕಟನೆ ತಿಳಿಸಿದೆ.
Next Story





