Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ಚುನಾವಣೆ: ನಾಮ ನಿರ್ದೇಶಿತ...

ವಿಧಾನಪರಿಷತ್ ಚುನಾವಣೆ: ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಬೇಡ; ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Dec 2021 9:09 PM IST
share
ವಿಧಾನಪರಿಷತ್ ಚುನಾವಣೆ: ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಬೇಡ; ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.9: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕು ತಿರಸ್ಕರಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಮೂಲಕ ಕೇಂದ್ರ ಚುನಾವಣೆ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಅವರು,ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶನ ಸದಸ್ಯರಿಗೆ ಮತದಾನದ ಹಕ್ಕು ನೀಡಬಾರದು. ಸಂವಿಧಾನದ 243 (ಆರ್) ನೇ ಪರಿಚ್ಛೇದದ ಅನ್ವಯ ನಾಮನಿರ್ದೇಶಿತ ಸದಸ್ಯರು ಕಲಾಪದಲ್ಲಿ ಪಾಲ್ಗೊಂಡು, ಸಲಹೆಗಳನ್ನು ನೀಡಬಹುದೇ ಹೊರತು ಮತದಾನ ಮಾಡಲು ಅವಕಾಶವಿಲ್ಲ ಎಂಬ ನಿಯಮವಿದೆ. ಈ ಬಗ್ಗೆ  ನಮ್ಮ ಪಕ್ಷದವರೇ ಆದ ಮಾಜಿ ಮೇಯರ್ ಪಿ.ಆರ್. ರಮೇಶ್  ನ್ಯಾಯಾಲಯದ ಮೊರೆ ಹೋಗಿದ್ದರು ಎಂದರು.

ಇಂದು ಮಧ್ಯಾಹ್ನ ಮಧ್ಯಂತರ ಆದೇಶ ಹೊರಡಿಸಿರುವ ನ್ಯಾಯಾಲಯವು, ನಾಮನಿರ್ದೇಶನ ಸದಸ್ಯರ ಮತಗಳನ್ನು ಮುಚ್ಚಿದ ಲಕೋಟೆಯಲ್ಲಿ, ಪ್ರತ್ಯೇಕ ಮತಪೆಟ್ಟಿಗೆಯಲ್ಲಿ ಇಡಬೇಕು. ತಾನು ಮುಂದಿನ ಆದೇಶ ನೀಡುವವರೆಗೂ ಅವುಗಳನ್ನು ತೆರೆಯಬಾರದು, ಮತಗಳ ಎಣಿಕೆಗೂ ಪರಿಗಣಿಸಬಾರದು ಎಂದು ಸೂಚಿಸಿ, ಸರಕಾರ ಮತ್ತು ಚುನಾವಣಾ ಆಯೋಗಕ್ಕೂ ನೋಟೀಸ್ ಜಾರಿ ಮಾಡಿದೆ ಎಂದು ಶಿವಕುಮಾರ್ ಹೇಳಿದರು.

ನ್ಯಾಯಾಲಯದ ಈ ಆದೇಶವನ್ನು ರಾಜ್ಯದ ಎಲ್ಲ 219 ಸ್ಥಳೀಯ ಸಂಸ್ಥೆಗಳಿಗೂ ಅನ್ವಯ ಮಾಡಬೇಕು. ಇಲ್ಲಿ ತಲಾ ಐವರು ನಾಮನಿರ್ದೇಶಿತ ಸದಸ್ಯರು ಇದ್ದಾರೆ. ಅವರೆಲ್ಲರ ಮತದಾನದ ಹಕ್ಕು ರದ್ದಪಡಿಸಬೇಕು ಎಂದು ರಾಜ್ಯ ಸರಕಾರವನ್ನು ಆಗ್ರಹಿಸುತ್ತಿದ್ದೇವೆ. ಕೇಂದ್ರ ಚುನಾವಣಾ ಆಯೋಗಕ್ಕೂ ಕಾಂಗ್ರೆಸ್ ಪಕ್ಷದಿಂದ ಮನವಿ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಈಗ ನ್ಯಾಯಾಲಯ ಮಧ್ಯಂತರ ಆದೇಶವನ್ನಷ್ಟೇ ನೀಡಿದೆ. ನಾಳೆ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಪುರಸ್ಕರಿಸಬಹುದು ಇಲ್ಲವೇ ತಿರಸ್ಕರಿಸಬಹುದು. ಹೀಗಾಗಿ ಮತದಾನದ ಹಕ್ಕು ರದ್ದುಪಡಿಸುವಂತೆ ಕೇಳುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಕೋರ್ಟ್ ನಮ್ಮ ಮನವಿಯನ್ನು ಪರಿಗಣಿಸುತ್ತದೆ ಎಂಬ ವಿಶ್ವಾಸವಿದೆ. ಅಂತಿಮವಾಗಿ ಕೋರ್ಟ್ ಆದೇಶಕ್ಕೆ ನಾವು ಬದ್ಧ ಎಂದರು.

ಹಿಂದೆ ನಮ್ಮ ಅವಧಿಯಲ್ಲೂ ಮತದಾನ ಆಗಿರಬಹುದು. ಆದರೆ ಸಂವಿಧಾನದ ಆಶಯ ಎಲ್ಲೋ ಒಂದು ಕಡೆ ನ್ಯಾಯಾಲಯದಲ್ಲಿ ಇತ್ಯರ್ಥ ಆಗಲೇಬೇಕಲ್ಲವೇ? ನಮಗೆ ಮನದಟ್ಟಾದ ವಿಷಯವನ್ನು ಕೋರ್ಟ್ ಗಮನಕ್ಕೆ ತಂದಿದ್ದೇವೆ. ನಮ್ಮ ವಕೀಲರು ನ್ಯಾಯಾಲಯಕ್ಕೂ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಅವರು ಹೇಳಿದರು.

ವಿಜಯಪುರದಲ್ಲಿ ಪಿಡಿಒಗಳನ್ನು ಬಿಜೆಪಿ ಚುನಾವಣೆ ಕೆಲಸಕ್ಕೆ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ದೂರುಗಳ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ಇಡೀ ಸರಕಾರದ ಆಡಳಿತ ಯಂತ್ರವೇ ದುರುಪಯೋಗ ಆಗುತ್ತಿದೆ ಎಂದರು.

ಎಲ್ಲ ಧರ್ಮದವರನ್ನೂ ಗೌರವದಿಂದ ಕಾಣಬೇಕು:

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಗೆ ಸರಕಾರ ಗಂಭೀರ ಚಿಂತನೆ ನಡೆಸಿರುವ ಬಗ್ಗೆ ಗಮನ ಸೆಳೆದಾಗ ಉತ್ತರಿಸಿದ ಶಿವಕುಮಾರ್, ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶಪೂರಿತ ಹೆಚ್ಚುವರಿ ತಿದ್ದುಪಡಿ ತರಲು ಕಾಂಗ್ರೆಸ್ ಪಕ್ಷದ ಸಂಪೂರ್ಣ ವಿರೋಧವಿದೆ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ, ಸಮುದಾಯಗಳಿಗೂ ಸಮಾನ ಗೌರವವಿದೆ ಎಂದರು.

ಧಾರವಾಡ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ನಮ್ಮದು ಜಾತ್ಯತೀತ ದೇಶ, ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್ ಮೇಲಿನ ದಾಳಿ, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ಸರಿಯಲ್ಲ. ಬಿಜೆಪಿ ಸರಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ರಾಜ್ಯದ ಗೌರವಕ್ಕೆ ಕುಂದು ಬರುವುದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆಗೂ ಭಂಗವಾಗಲಿದೆ ಎಂದು ಅವರು ಹೇಳಿದರು.

ಕ್ರೈಸ್ತ ಸಮುದಾಯ ಶಿಕ್ಷಣ, ಆರೋಗ್ಯ ಮತ್ತಿತರ ಸಮಾಜ ಸೇವೆಗಳ ಮೂಲಕ ಗಮನ ಸೆಳೆದಿದೆ.‌ ಗೌರವದಿಂದ ಸೇವೆ ಮಾಡುತ್ತಾ ಬಂದಿದೆ. ಅವರ ಮನಸ್ಸಿಗೆ ನೋವುಂಟು ಮಾಡುವುದು ಸರಿಯಲ್ಲ ಎಂದು ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X