ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರಂತೆ ನಾನು ಕೂಡ ಮುಖ್ಯಮಂತ್ರಿ ಸ್ಥಾನ ಕೇಳುತ್ತೇನೆ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ

ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ದಾವಣಗೆರೆ: 'ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಂತೆ ನಾನು ಮುಖ್ಯಮಂತ್ರಿ ಸ್ಥಾನ ಕೇಳುತ್ತೇನೆ.ಅದರೆ, ಕೊನೆಯಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ' ಎಂದು ಕಾಂಗ್ರೆಸ್ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಯಾರ ಬೆಂಬಲವೂ ಬೇಡ. ಎಂಎಲ್ ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುತ್ತೆ. ಎಲ್ಲಾ ಕಡೇ ಕಾಂಗ್ರೆಸ್ ಗೆ ಒಳ್ಳೆಯ ಗಾಳಿ ಇದೆ. ಎಂಎಲ್ ಸಿ ಚುನಾವಣೆ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮುಂದೆ ವಿಧಾನ ಸಭೆ ಚುನಾವಣೆಯನ್ನು ಗೆಲ್ಲುತ್ತೇವೆ. 140 ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದರು.
Next Story





