ಪ್ರಿಯಾಂಕಾ ಗಾಂಧಿ ಭೇಟಿಯ ದಿನವೇ ಗೋವಾದಲ್ಲಿ ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜೀನಾಮೆ

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭೇಟಿಯ ದಿನವೇ(ಶುಕ್ರವಾರ)ಅಲ್ಲಿನ ಕಾಂಗ್ರೆಸ್ ನಾಯಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ಪೊರ್ ವೊರಿಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರ ಗುಂಪೊಂದು ಶುಕ್ರವಾರ ಬೆಳಗ್ಗೆ ರಾಜೀನಾಮೆ ಸಲ್ಲಿಸಿತು. ನಾಯಕರ ದಿಢೀರ್ ರಾಜೀನಾಮೆಯಿಂದಾಗಿ ಗೋವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಈಗ ಗೊಂದಲಕ್ಕೆ ಸಿಲುಕಿದೆ.
ಪೊರ್ ವೊರಿಮ್ ವಿದಾನಸಭಾ ಕ್ಷೇತ್ರದ ಬೆಳವಣಿಗೆ ಬೆನ್ನಲ್ಲೆ ದಕ್ಷಿಣ ಗೋವಾ ಕಾಂಗ್ರೆಸ್ ನ ಹಿರಿಯ ನಾಯಕ ಮೊರೊನಾ ರೆಬೆಲೊ ರಾಜೀನಾಮೆ ನೀಡಿದ್ದಾರೆ.
ಗೋವಾ ಕಾಂಗ್ರೆಸ್ ನಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ದಿನೇಶ್ ಗುಂಡೂರಾವ್ ಅವರು ಜಿಎಫ್ ಸಿ ಮುಖ್ಯಸ್ಥ ವಿಜಯ ಸರ್ ದೇಸಾಯಿ ಹಾಗೂ ಜಿಪಿಸಿಸಿ ಅಧ್ಯಕ್ಷ ಗಿರೀಶ್ ಜೋಂಡಕರ್ ಅವರೊಂದಿಗೆ ಶನಿವಾರ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.
Next Story





