ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ: ಸಚಿವ ಬಿ.ಸಿ.ನಾಗೇಶ್

photo: @BCNagesh_bjp
ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಸರಕಾರಿ ಶಾಲೆಗಳಲ್ಲಿ15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ ಮಾಡಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
► ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳ ಭರ್ತಿ.
► ಕಲ್ಯಾಣ ಕರ್ನಾಟಕ ವೃಂದ ಪದವೀಧರ ಪ್ರಾಥಮಿಕ ಶಾಲೆ (6ರಿಂದ 8) ಶಿಕ್ಷಕರ 5 ಸಾವಿರ ಹುದ್ದೆಗಳ ಭರ್ತಿ.
► ಕೆಲ ದಿನಗಳಲ್ಲೇ ನೇಮಕ ಪ್ರಕ್ರಿಯೆ ಅಧಿಸೂಚನೆ ಹೊರಡಿಸಲಾಗುತ್ತದೆ.
► ಶಿಕ್ಷಕರ ಕೊರತೆ ನೀಗಿಸಲು ಶಿಕ್ಷಣದ ಗುಣಮಟ್ಟ ಕಾಪಾಡಲು ಈಗಾಗಲೇ 23 ಸವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗುತ್ತಿದ್ದು, ಹೆಚ್ಚುವರಿಯಾಗಿ ಅತಿಥಿ ಶಿಕ್ಷಕರ ಸೇವೆ ಪಡೆಯಲು ನಿರ್ಧಾರ.
15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ. ಶೀಘ್ರದಲ್ಲೇ ಅಧಿಸೂಚನೆ. @BSBommai@CMofKarnataka pic.twitter.com/Ln4xuyMJLj
— B.C Nagesh (@BCNagesh_bjp) December 11, 2021







