ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಜೈಲಿನ ಮೊದಲ ಮಹಡಿಯಿಂದ ಬಿದ್ದು ಮೃತ್ಯು
ಆತ್ಮಹತ್ಯೆ ಶಂಕೆ

ಸಾಂದರ್ಭಿಕ ಚಿತ್ರ (source: PTI)
ಚಾಮರಾಜನಗರ, ಡಿ.11: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಯೋರ್ವ ಜೈಲಿನ ಮೊದಲ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಗರದ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮ ನಿವಾಸಿ ಮಂಜು(42) ಮೃತಪಟ್ಟ ಕೈದಿ. ಈತ ತನ್ನ ಪತ್ನಿಯನ್ನು ಕೊಲೆಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಇಂದು ಬೆಳಗ್ಗೆ ಈತ ಜೈಲಿನೊಳಗೆ ಮೊದಲ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನೆನ್ನಲಾಗಿದೆ. ಮಂಜುವನ್ನು ಕೂಡಲೇ ನಗರದ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿಮಧ್ಯೆ ಆತ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಜುವಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯವು ಡಿ.8ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಬೇಸತ್ತು ಆತ ಮೊದಲ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕಾರಾಗೃಹದ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
Next Story





