Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ'...

ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ' ವ್ಯಾಪ್ತಿಗೆ: ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ11 Dec 2021 3:03 PM IST
share
ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ ವ್ಯಾಪ್ತಿಗೆ: ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಡಿ.11: ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ' ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಸುಬ್ರಹ್ಮಣ್ಯನಗರ ವಾರ್ಡ್ ವ್ಯಾಪ್ತಿಯ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿಂದು ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರದಲ್ಲಿ ಇತ್ತೀಚೆಗೆ ಚಾಲನೆ ಕಂಡಿದ್ದ `ಜನಸೇವಕ’ಕಾರ್ಯಕ್ರಮ ಕುರಿತಾದ ವಾರ್ಡ್ ವಾರು ಪ್ರತ್ಯೇಕ ಕಿರುಹೊತ್ತಿಗೆ ಬಿಡುಗಡೆ ಹಾಗೂ ಜನರಿಗೆ ಸಾಂಕೇತಿಕವಾಗಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮದ ನಂತರ ಅವರು ಮಾತನಾಡುತ್ತಿದ್ದರು.

ಬಿಡಿಎ ಸೇವೆಗಳು ಕೂಡ ಇದರ ವ್ಯಾಪ್ತಿಗೆ ತರಬೇಕೆಂದು ಸ್ಥಳೀಯರು ಮನವಿ ಸಲ್ಲಿಸಿದ್ದಕ್ಕೆ ಅವರು ಉತ್ತರ ನೀಡಿದರು. ಈ ಸಂಬಂಧ ಮುಖ್ಯಮಂತ್ರಿ ಜತೆಗೂ ಚರ್ಚಿಸಲಾಗುವುದು ಎಂದರು.

'ಜನಸೇವಕ’ ಕಾರ್ಯಕ್ರಮದ ಬಗ್ಗೆ ಜನಜಾಗೃತಿ ಮೂಡಿಸಲು ಮಲ್ಲೇಶ್ವರಂ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಮನೆಗೂ ಜನಸೇವಕ ಕೈಪಿಡಿಯನ್ನು ವಿತರಿಸಲಾಗುವುದು. ಇದರ ಮೂಲಕ ಜನರು ತಮಗೆ ಅಗತ್ಯವಿರುವ ಸೇವೆಗಳನ್ನು ನಿಗದಿತ ಶುಲ್ಕ ಭರಿಸಿ, ಮನೆ ಬಾಗಿಲಲ್ಲೇ ಪಡೆದುಕೊಳ್ಳಬಹುದು ಎಂದು ಅವರು ನುಡಿದರು.

ಜನರು ಯಾವ ಸೇವೆ ತಮಗೆ ಅಗತ್ಯವಿದೆ ಎಂದು ತಿಳಿಸಿದರೆ ನುರಿತ `ಜನಸೇವಕ’ ಸ್ವಯಂಸೇವಕರು ಮನೆ ಬಾಗಿಲಿಗೇ ಬಂದು, ಆಯಾ ಸೇವೆಗೆ ಅಗತ್ಯವಿರುವ ದಾಖಲೆಗಳನ್ನು ಪಡೆದುಕೊಂಡು ನಿಗದಿತ ದಿನಗಳಲ್ಲಿ ಆ ಸೇವೆಗಳನ್ನು ತಲುಪಿಸಲಿದ್ದಾರೆ. ಇದರಿಂದ ಜನರು ಅನಗತ್ಯವಾಗಿ ಕಚೇರಿಗೆ ಅಲೆಯುವುದು, ಮಧ್ಯವರ್ತಿಗಳಿಂದ ವಂಚನೆಗೆ ಒಳಗಾಗುವುದು ಮತ್ತು ಲಂಚ ಕೊಡುವುದು ತಪ್ಪುತ್ತದೆ ಎಂದು ಅವರು ತಿಳಿಸಿದರು.

`ಜನಸೇವಕ’ ಮೂಲಕ ಪಡೆಯುವ ಸೇವೆಗಳಿಗೆ ಜನರು ಯಾರಿಗೂ ದುಡ್ಡು ಕೊಡಬೇಕಾದ ಅಗತ್ಯವೇ ಇಲ್ಲ. ನಿಗದಿತ

ಸರಕಾರಿ ಶುಲ್ಕ ಮತ್ತು ಜನಸೇವಕ ಶುಲ್ಕಗಳನ್ನು ನಿಗದಿತ ಖಾತೆಗಳಿಗೆ ಡಿಜಿಟಲ್ ಪಾವತಿ ಮಾಡಿದರೆ ಸಾಕು ಎಂದು ಸಚಿವರು ವಿವರಿಸಿದರು.

*ಮನೆಮನೆಗೂ `ಜನಸೇವಕ ಕೈಪಿಡಿ’ ವಿತರಣೆ
ಮಲ್ಲೇಶ್ವರಂ ಕ್ಷೇತ್ರವ್ಯಾಪ್ತಿಯಲ್ಲಿರುವ ಮನೆಮನೆಗೂ ಕ್ಷೇತ್ರದ ಶಾಸಕ ಮತ್ತು ಸಚಿವರಾದ ಅಶ್ವತ್ಥನಾರಾಯಣ ಅವರ ಕಚೇರಿಯಿಂದ `ಜನಸೇವಕ ಸಮಗ್ರ ಮಾಹಿತಿ ಕೈಪಿಡಿ’ಯನ್ನು ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ಇದಕ್ಕೂ ಚಾಲನೆ ನೀಡಲಾಯಿತು.

ಈ ಕೈಪಿಡಿಯಲ್ಲಿ ಸೇವೆಗಳ ವಿವರಗಳು, ಅವುಗಳಿಗೆ ಸರಕಾರ ನಿಗದಿ ಪಡಿಸಿರುವ ಶುಲ್ಕ, ಜನಸೇವಕ ಶುಲ್ಕ, ಸೇವೆಗೆ ಬೇಕಾಗುವ ದಾಖಲಾತಿಗಳ ವಿವರ, ಎಷ್ಟು ದಿನಗಳಲ್ಲಿ ಸೇವೆ ಒದಗಿಸಲಾಗುವುದು ಮತ್ತು ಸಂಬಂಧಿಸಿದ ಜನಸೇವಕರ/ಅಧಿಕಾರಿಗಳ ದೂರವಾಣಿ ಸಂಖ್ಯೆ ಎಲ್ಲವನ್ನೂ ನೀಡಲಾಗಿದೆ. ಈ ಸೇವೆಗಳಲ್ಲಿ ಆಧಾರ್ ಕಾರ್ಡ್ ಸಂಬಂಧಿತ ಸೇವೆಗಳು, ಆರೋಗ್ಯ ಹೆಲ್ತ್ ಕಾರ್ಡ್, ಬಯೋಮೆಟ್ರಿಕ್ ಪರಿಷ್ಕರಣೆ, ಆದಾಯ ಮತ್ತು ಜಾತಿ ಪ್ರಮಾಣಪತ್ರ, ಭೂ ಹಿಡುವಳಿ ಪ್ರಮಾಣಪತ್ರ ಮತ್ತು ಬೋನಾಫೈಡ್ ಪ್ರಮಾಣಪತ್ರ ಮುಂತಾದವು ಸೇರಿವೆ. ಈ ಸೇವೆಗಳನ್ನೆಲ್ಲ ಕನಿಷ್ಠ ಒಂದು ದಿನದಿಂದ ಹಿಡಿದು ಗರಿಷ್ಠ 21 ದಿನಗಳಲ್ಲಿ ಜನರ ಮನೆ ಬಾಗಿಲಿಗೇ ತಲುಪಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

*79 ಸೇವೆಗಳಿಗೆ 79 ಬೂತ್ ಸ್ಥಾಪನೆ
ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ `ಜನಸೇವಕ’ ಉಪಕ್ರಮದಡಿ ಒದಗಿಸಲಾಗುವ ಎಲ್ಲ 79 ಸೇವೆಗಳಿಗೆ ಸಂಬಂಧಿಸಿದಂತೆಯೂ ತಲಾ ಒಂದೊಂದು ಬೂತ್ ತೆರೆಯಲಾಗಿತ್ತು. ಇವುಗಳ ಮುಂದೆ ನೂರಾರು ಜನರು ಸರದಿಯಲ್ಲಿ ನಿಂತು ತಮಗೆ ಬೇಕಾದ ಸೇವೆಗಳನ್ನು ಪಡೆದುಕೊಳ್ಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಚಿವರು 30 ನಾಗರಿಕರಿಗೆ ಹಲವು ಸೇವೆಗಳನ್ನು ಸಾಂಕೇತಿಕವಾಗಿ ವಿತರಿಸಿದರು. ಇದೇ ಮಾದರಿಯನ್ನು ಕ್ಷೇತ್ರದ ಎಲ್ಲಾ ವಾರ್ಡುಗಳಲ್ಲೂ ಅನುಸರಿಸಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಇ-ಆಡಳಿತ ಯೋಜನಾಧಿಕಾರಿ ಬಿ.ಎನ್.ವರಪ್ರಸಾದ್ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X