Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೇ.7.5 ಮೀಸಲಾತಿ ವಿಚಾರ: ತ್ರಿಸದಸ್ಯ...

ಶೇ.7.5 ಮೀಸಲಾತಿ ವಿಚಾರ: ತ್ರಿಸದಸ್ಯ ಸಮಿತಿ ಕೈ ಬಿಡಲು ವಾಲ್ಮೀಕಿ ಸಮುದಾಯದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ11 Dec 2021 7:21 PM IST
share
ಶೇ.7.5 ಮೀಸಲಾತಿ ವಿಚಾರ: ತ್ರಿಸದಸ್ಯ ಸಮಿತಿ ಕೈ ಬಿಡಲು ವಾಲ್ಮೀಕಿ ಸಮುದಾಯದ ಒತ್ತಾಯ

ಚಿತ್ರದುರ್ಗ, ಡಿ.11: ರಾಜ್ಯದ ಪರಿಶಿಷ್ಟ ವರ್ಗಕ್ಕೆ ಶೇ.7.5 ಮೀಸಲಾತಿ ಶಿಫಾರಸು ಮಾಡಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಆದರೆ ಸರ್ಕಾರ ಕುತಂತ್ರ ಮಾಡಿ ತ್ರಿಸದಸ್ಯ ಸಮಿತಿ ರಚಿಸಿ ದ್ರೋಹ ಬಗೆಯುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಹಸಕಲಾಗುವುದು ಎಂದು ವಾಲ್ಮೀಕಿ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕೋಟೆ ನಾಡು ಚಿತ್ರದುರ್ಗದಲ್ಲಿ ಮೀಸಲಾತಿಗಾಗಿ ಸಾಮೂಹಿಕ ನಾಯಕತ್ವದಡಿ ಸಮಾನ ಮನಸ್ಕರು ಸಭೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

ರಾಜ್ಯ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರು, ಚಳವಳಿಗಾರರಾದ ಮಾರನಾಯಕ ಮಾತನಾಡಿ, ಸರ್ಕಾರ, ರಾಜಕೀಯ ನಾಯಕರು ನಮ್ಮ ಸಮುದಾಯದ ಸಾಮಾನ್ಯ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ದಾಳಕ್ಕೆ ನಮ್ಮ ಸಮುದಾಯದ ಯುವಕರನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ಯುವಕರನ್ನು ಬೆಳೆಸುವುದಾಗಲಿ, ಸಮುದಾಯದ ಜನರಿಗೆ ಮೀಸಲಾತಿ ಕೊಡಿಸುವ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ. ಇವರಿಗೆಲ್ಲ ರಾಜಕೀಯ ಇಚ್ಛಾಶಕ್ತಿ ಕೊರತೆ ಇದೆ. ಇದೇ ಕಾರಣಕ್ಕೆ ನಮ್ಮ ಸಮುದಾಯ 30 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು. 

ಕರ್ನಾಟಕ ನಾಯಕರ ಒಕ್ಕೂಟದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರಮೇಶ್ ಹಿರೇಜಂಬೂರು ಮಾತನಾಡಿ, ಈ ರಾಜ್ಯ ಸರ್ಕಾರಶೇ.7.5 ಮೀಸಲಾತಿ ವಿಚಾರದಲ್ಲಿ ಸಂವಿಧಾನ ವಿರೋಧಿ ನಿರ್ಧಾರ ಕೈಗೊಂಡಿದೆ. ಒಬ್ಬರು ನ್ಯಾಯಮೂರ್ತಿ ನೀಡಿದ ವರದಿಯನ್ನು ಪರಿಶೀಲಿಸಲು ಮತ್ತೊಬ್ಬರು ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಸಮಿತಿ ರಚಿಸಿದ್ದುತಪ್ಪು. ಆದರೆ ತ್ರಿಸದಸ್ಯ ಸಮಿತಿಗೆ ಶೇ.7.5 ಮೀಸಲಾತಿ ವಿಚಾರವನ್ನೂ ನೀಡಿದ್ದು ಅಸಂವಿಧಾನಿಕ. ಇಷ್ಟು ದಿನ ಮೀಸಲಾತಿ ಕೊಟ್ಟೇ ಕೊಡ್ತೀವಿ ಎಂದಿದ್ದವರು ಈಗ ಹೊಸ ಕಥೆ ಸೃಷ್ಟಿ ಮಾಡುತ್ತಿದ್ದಾರೆ. ಪರಿಶಿಷ್ಟ ಸಮುದಾಯದ ಅಮಾಯಕ ಜನರನ್ನು ಸ್ವಾರ್ಥ ರಾಜಕಾರಣಕ್ಕೆ ಬಳಸಿಕೊಳ್ಳುತ್ರಿದ್ದಾರೆ. ನಮ್ಮ ಸಮುದಾಯದ ನಾಗರಿಕರು ಸಹನೆಯುಳ್ಳವರು, ಆದರೆ ದಡ್ಡರಲ್ಲ. ಸಹನೆಯ ಕಟ್ಟೆಯೊಡೆದಾಗ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದರು. 

ಬೆಳಗಾವಿ ಅಧಿವೇಶನದಲ್ಲಿ ಶೇ.7.5 ಮೀಸಲಾತಿ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡಬೇಕು. 224 ಶಾಸಕರಿಗೂ ನಮ್ಮ ಸಮುದಾಯದ ಜನ ಮತ ಹಾಕಿದ್ದಾರೆ. ಅವರೂ ಸಹ ನಮ್ಮ ಪರಿಶಿಷ್ಟ ಸಮುದಾಯದ ಪರ ಧ್ವನಿ ಎತ್ತಿ ಚರ್ಚೆ ಮಾಡಬೇಕು. ಸಮುದಾಯದ ಎಲ್ಲ ಸಂಘಟನೆ ನಾಯಕರು ಒಗ್ಗಟ್ಟಾಗಿ ಎಲ್ಲ 224 ಶಾಸಕರಿಗೂ ಮನವಿ ನೀಡಿ ಒತ್ತಡ ಹೇರೋಣ. ಸದನದಲ್ಲಿ ಚರ್ಚೆ ನಡೆಸಿ ತ್ರಿಸದಸ್ಯ ಸಮಿತಿಯಿಂದ ಶೇ.7.5 ಮೀಸಲಾತಿ ವಿಚಾರ ಹೊರಗಿಡಲು ನಿರ್ಧರಿಸಬೇಕು. ಅನಗತ್ಯವಾಗಿ ಮುಖ್ಯಮಂತ್ರಗಳು ಇಲ್ಲ ಸಲ್ಲದ ನೆಪ ಹೇಳಕೂಡದು. ಇದಕ್ಕೆ ನಮ್ಮ ಸಮುದಾಯದ ಶಾಸಕರೂ ಅವಕಾಶ ನೀಡಬಾರದು ಎಂದು. ಇದಕ್ಕೆ ಇಡೀ ಸಭೆ ಒಕ್ಕೊರಲಿನ ಬೆಂಬಲ ಸೂಚಿಸಿತು. 

ವಾಲ್ಮೀಕಿ ಸ್ವಾಭಿಮಾನಿ ಸೇನೆಯ ನಾಯಕ ಚಳವಳಿ ರಾಜಣ್ಣ ಮಾತನಾಡಿ, ಹೋರಾಟ ತಾಯಿ ಗರ್ಭ ಇದ್ದಂತೆ, ಇಲ್ಲಿ ಹೋರಾಟದಲ್ಲಿ ತೊಡಗಿಸಿಕೊಂಡವರಿಗೆ ಹೊಸ ಜನ್ಮ ನೀಡುತ್ತದೆ. ಈ ಮೀಸಲಾತಿ ಹೋರಾಟ ಹೊಸ ಹೊಸ ನಾಯಕರನ್ನು ನಾಯಕ ಸಮುದಾಯದಲ್ಲಿ ಹುಟ್ಟು ಹಾಕುತ್ತದೆ. ಮೀಸಲಾತಿ ನಮ್ಮ ಹಕ್ಕು. ನಾವು ಭಿಕ್ಷೆ ಕೇಳುತ್ತಿಲ್ಲ. ಆದರೆ ಸರ್ಕಾರಕ್ಕೆ, ನಮ್ಮ ಸಮುದಾಯದ ನಾಯಕರಿಗೆ ಇಚ್ಚಾಶಕ್ತಿ ಕೊರತೆ ಇದೆ. ಹೀಗಾಗಿ ನಮಗೆ ಇನ್ನೂ ಮೀಸಲಾತಿ ವಿಚಾರದಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಯುವ ನಾಯಕರಾದ ಹಾಗಲವಾಡಿ ಶಂಕರ್, ಕುಪ್ಪೂರು ಶ್ರೀಧರ್ ನಾಯಕ್, ಧರಣಿ ಕುಮಾರ್ ನಾಯಕ್, ಶ್ರೀನಿವಾಸ ನಾಯಕ್  ಮಾತನಾಡಿ ಈ ಹೋರಾಟದಲ್ಲಿ ಜನಸಾಮಾನ್ಯರಿಂದಲೇ ಶುರುವಾಗಲಿ. ಇಲ್ಲಿ ಯಾವ ರಾಜಕಾರಣಿಗಳು ಹಾಗೂ ಸ್ವಾಮೀಜಿಗಳ ಉಸ್ತುವಾರಿಯೂ ಬೇಡ. ಜನಸಾಮಾನ್ಯರಿಂದಲೇ ಶುರುವಾದ ಹೋರಾಟ ಎಂದೂ ಸೋಲು ಕಂಡಿಲ್ಲ ಎಂದರು. ಇದಕ್ಕೆ ಸಭೆ ಸಮ್ಮತಿಸಿತು. 

ರಾಜ್ಯದ ಎಲ್ಲ 224 ಶಾಸಕರಿಗೂ ಮನವಿ ನೀಡಿ ಸದನದಲ್ಲಿ ಶೇ.7.5 ಮೀಸಲಾತಿ ವಿಚಾರ ಚರ್ಚಿಸಲು ಒತ್ತಡ ಹೇರಬೇಕು. ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಸದೆ ಹೋದರೆ ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಸಮುದಾಯದ ಜನರು ಮುತ್ತಿಗೆ ಹಾಕಲು ತೀರ್ಮಾನಿಸಲಾಯಿತು. ಯುವ ಮುಖಂಡ ಭರತ್  ನೇತೃತ್ವದಲ್ಲಿ ಹೋರಾಟದ ಆಗುಹೋಗುಗಳ ವಿಚಾರದಲ್ಲಿ ಚೆರ್ಚೆ ನಡೆಸಲಾಯಿತು. 

ಸಭೆಯಲ್ಲಿ ಯುವ ಮುಖಂಡರಾದ ಮಂಜುಳಾ ಶ್ರೀನಿವಾಸ್ ನಾಯಕ್, ರಜನಿ ಎಂ.ಆರ್., ಕೆಂಚಮ್ಮ, ಕವಿತಾ, ಅಶೋಕ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X