ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮಂಡ್ಯ: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸ್ನೇಹಿತರ ಮನೆಗೆ ಖಾಸಗಿ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಕ್ಕಳಲ್ಲಿ ಅಪೌಷ್ಠಿಕತೆ ಕಾಡುತ್ತಿರುವುದು ವರದಿ ಇದೆ. ಈ ಕುರಿತು ಕೇಂದ್ರ ಸರಕಾರವೂ ವರದಿ ಬಂದಿದೆ.ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗೆ ಒತ್ತು ಕೊಡುಬೇಕಾಗಿದೆ. ಮೊಟ್ಟೆ, ಬಾಳೆ ಹಣ್ಣು ಜತೆಗೆ ಇತರ ಪೌಷ್ಠಿಕಾಂಶವುಳ್ಳ ಆಹಾರ ಪದಾರ್ಥಗಳನ್ನೂ ಆಯ್ಕೆಮಾಡಲಾಗಿದ್ದು, ತಜ್ಞರು ಒಪ್ಪಿಗೆ ನೀಡಿದರೆ ಅದನ್ನೂ ಜಾರಿಗೊಳಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಕ್ಕಳು ತಮಗೆ ಇಷ್ಟವಾದ ಆಹಾರ ಸೇವೆನೆ ಮಾಡಬಹುದು. ಇದರಲ್ಲಿ ಯಾವುದೇ ಒತ್ತಡ ಇಲ್ಲ ಎಂದರು.
ರಾಜ್ಯದ ಸರಕಾರಿ ಶಾಲೆಗಳಲ್ಲಿ15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದ ನಿರ್ಧಾರ ಮಾಡಿದ್ದು, ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
Next Story





