ಉಡುಪಿ: ಮಲಬಾರ್ ಗೋಲ್ಡ್ ನಲ್ಲಿ ಕಾನೂನು ಅರಿವು ಕಾರ್ಯಾಗಾರ

ಉಡುಪಿ, ಡಿ.11: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಗಾರ ಶುಕ್ರವಾರ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಹಾಗೂ ನ್ಯಾಯಾಧೀಶೆ ಶರ್ಮಿಳಾ ಎಸ್. ಉದ್ಘಾಟಿಸಿ ಕಾನೂನು ಅರಿವು ಕುರಿತು ಮಾತನಾಡಿದರು. ಬಾಲ ನ್ಯಾಯ ಮಂಡಳಿಯ ನ್ಯಾಯವಾದಿ ಅಮೃತ ಕಲಾ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್‌ನ ಮುಖ್ಯಸ್ಥ ಹಫೀಝ್ ರೆಹಮಾನ್ ಉಪಸ್ಥಿತರಿದ್ದರು.
Next Story





