ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 20 ಮಂದಿಗೆ ಕೊರೋನ ಪಾಸಿಟಿವ್

ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 20 ಕೊರೋನ ಪಾಸಿಟಿವ್ ಪ್ರಕರಣ ವರದಿಯಾಗಿದೆ. 19 ಮಂದಿ ಗುಣಮುಖರಾಗಿದ್ದಾರೆ. ಶನಿವಾರ ಜಿಲ್ಲೆಯಲ್ಲಿ ಕೊರೋನದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ. 0.31 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 1,16,047 ಕ್ಕೆ ಏರಿಕೆಯಾಗಿದೆ. ಈ ಪೈಕಿ 142 ಸಕ್ರಿಯ ಪ್ರಕರಣಗಳು. 114,207 ಮಂದಿ ಗುಣಮುಖರಾಗಿದ್ದಾರೆ. 1698 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 90,175 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 1,09,11,770 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story





