ತಮಿಳುನಾಡು: ಅಂಬೇಡ್ಕರ್ ಪ್ರತಿಮೆ ಧ್ವಂಸ; ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ರವಿವಾರ ಬೆಳಗ್ಗೆ ಪ್ರತಿಮೆಯ ಬಲಗೈ ಮುರಿದಿರುವುದು ಕಂಡು ಬಂದಿದೆ ಎಂದು India Today ವರದಿ ಮಾಡಿದೆ.
ಓಮಲೂರು ಪಟ್ಟಣದ ಕಮಲಾಪುರದ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸ್ಥಳೀಯರು ರಸ್ತೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆದಿದ್ದು, ಸುಮಾರು ಅರ್ಧ ಗಂಟೆ ಸಂಚಾರ ದಟ್ಟಣೆ ಉಂಟಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಓಮಲೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
ಪ್ರಕರಣ ದಾಖಲಾಗಿದ್ದು ಓಮಲೂರು ಪೊಲೀಸರು ಪ್ರತಿಮೆ ಧ್ವಂಸ ಮಾಡಿದವರನ್ನು ಪತ್ತೆ ಹಚ್ಚುವ ಸಲುವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
Next Story