Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದಿನ ಮೂರು ವರ್ಷಗಳಲ್ಲಿ ಎನ್ಎಂಪಿಯಡಿ...

ಮುಂದಿನ ಮೂರು ವರ್ಷಗಳಲ್ಲಿ ಎನ್ಎಂಪಿಯಡಿ 25 ವಿಮಾನ ನಿಲ್ದಾಣಗಳ ಆಸ್ತಿ ನಗದೀಕರಣ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ12 Dec 2021 5:53 PM IST
share
ಮುಂದಿನ ಮೂರು ವರ್ಷಗಳಲ್ಲಿ ಎನ್ಎಂಪಿಯಡಿ 25 ವಿಮಾನ ನಿಲ್ದಾಣಗಳ ಆಸ್ತಿ ನಗದೀಕರಣ: ಕೇಂದ್ರ ಸರಕಾರ

ಹೊಸದಿಲ್ಲಿ,ಡಿ.12: ರಾಷ್ಟ್ರೀಯ ಹಣಗಳಿಕೆ ಯೋಜನೆ (ಎನ್ಎಂಪಿ)ಯಡಿ 2022 ಮತ್ತು 2025ರ ನಡುವಿನ ನಾಲ್ಕು ವರ್ಷಗಳಲ್ಲಿ ಆಸ್ತಿ ನಗದೀಕರಣಕ್ಕಾಗಿ ಒಟ್ಟು 25 ವಿಮಾನ ನಿಲ್ದಾಣಗಳನ್ನು ಕೇಂದ್ರವು ಗುರುತಿಸಿದೆ ಎಂದು ಸಹಾಯಕ ವಾಯುಯಾನ ಸಚಿವ ವಿ.ಕೆ.ಸಿಂಗ್ ತಿಳಿಸಿದ್ದಾರೆ. 

ಸಚಿವರ ಹೇಳಿಕೆಯಂತೆ ಈ 25 ವಿಮಾನ ನಿಲ್ದಾಣಗಳು ಭುವನೇಶ್ವರ, ವಾರಣಾಸಿ, ಅಮೃತಸರ, ತಿರುಚ್ಚಿ, ಇಂದೋರ್,ರಾಯಪುರ, ಕಲ್ಲಿಕೋಟೆ,‌ ಕೊಯಮತ್ತೂರು, ನಾಗಪುರ, ಪಾಟ್ನಾ, ಮದುರೈ, ಸೂರತ್, ರಾಂಚಿ, ಜೋಧಪುರ, ಚೆನ್ನೈ, ವಿಜಯವಾಡಾ, ವಡೋದರಾ, ಭೋಪಾಲ, ತಿರುಪತಿ, ಹುಬ್ಬಳ್ಳಿ, ಇಂಫಾಲ, ಅಗರ್ತಲಾ, ಉದಯಪುರ, ಡೆಹ್ರಾಡೂನ್ ಮತ್ತು ರಾಜಮಂಡ್ರಿಗಳಲ್ಲಿವೆ.

ವಿತ್ತವರ್ಷ 2019-20ರಲ್ಲಿ ವಾರ್ಷಿಕ ನಾಲ್ಕು ಲಕ್ಷಕ್ಕೂ ಅಧಿಕ ಪ್ರಯಾಣಿಕರ ಸಂಖ್ಯೆ ಮತ್ತು ರಾಷ್ಟ್ರೀಯ ಮೂಲಸೌಕರ್ಯ ಯೋಜನೆ (ಎನ್ಐಪಿ)ಯಂತೆ ಗಣನೀಯ ಹಾಲಿ ಪ್ರಗತಿಯಲ್ಲಿರುವ ಅಥವಾ ಉದ್ದೇಶಿತ ಬಂಡವಾಳ ವೆಚ್ಚ ಯೋಜನೆಯಂತಹ ಮಾನದಂಡಗಳ ಆಧಾರದಲ್ಲಿ ಈ 25 ವಿಮಾನ ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದೆ.

ವಿತ್ತವರ್ಷ 2025ರವರೆಗಿನ ನಾಲ್ಕು ವರ್ಷಗಳಲ್ಲಿ ದೇಶಾದ್ಯಂತ 25 ವಿಮಾನ ನಿಲ್ದಾಣಗಳ ಆಸ್ತಿ ನಗದೀಕರಣದ ಮೂಲಕ 20,782 ಕೋ.ರೂ.ಗಳನ್ನು ಸಂಗ್ರಹಿಸಲು ತಾನು ಯೋಜಿಸಿರುವುದಾಗಿ ಸರಕಾರವು ಈ ವರ್ಷದ ಆಗಸ್ಟ್ನಲ್ಲಿ ಹೇಳಿತ್ತು.

ಸರಕಾರದ ಯೋಜನೆಯಂತೆ 2022ರಲ್ಲಿ ಆರು,2023ರಲ್ಲಿ ಎಂಟು,2024ರಲ್ಲಿ ಆರು ಮತ್ತು 2025ರಲ್ಲಿ ಐದು ವಿಮಾನ ನಿಲ್ದಾಣಗಳನ್ನು ಆಸ್ತಿಗಳು ನಗದೀಕರಣಗೊಳ್ಳಲಿವೆ.

ಹಿಂದಿನ ಹಣಕಾಸು ವರ್ಷದಲ್ಲಿ ಕೊರೋನವೈರಸ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿಯ 137 ವಿಮಾನ ನಿಲ್ದಾಣಗಳ ಪೈಕಿ 133 ಭಾರೀ ನಷ್ಟವನ್ನು ಅನುಭವಿಸಿವೆ.ಕಾಂಡ್ಲಾ (0.11 ಕೋ.ರೂ.),ಕಾನ್ಪುರ ಚಕೇರಿ(6.07 ಕೋ.ರೂ),ಬರೇಲಿ (0.68 ಕೋ.ರೂ.) ಮತ್ತು ಪೋರಬಂದರ್ (1.54 ಕೋ.ರೂ.) ಹೊರತುಪಡಿಸಿ ಇತರ ಎಲ್ಲ ವಿಮಾನ ನಿಲ್ದಾಣಗಳು ಭಾರೀ ನಷ್ಟದಲ್ಲಿವೆ ಎಂದು ಸಚಿವ ಸಿಂಗ್ ತಿಳಿಸಿದರು.

ದಿಲ್ಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳು ಅನುಕ್ರಮವಾಗಿ 317 ಕೋ.ರೂ. ಮತ್ತು 331 ಕೋ.ರೂ.ಗಳ ಭಾರೀ ನಷ್ಟವನ್ನು ಅನುಭವಿಸಿವೆ. 2019-20ರಲ್ಲಿ 146 ಕೋ.ರೂ.ಗಳ ಲಾಭವನ್ನು ಗಳಿಸಿದ್ದ ಮತ್ತು 2020-21ರಲ್ಲಿ 118 ಕೋ.ರೂ.ಗಳ ನಷ್ಟ ಅನುಭವಿಸಿರುವ ಗೋವಾದಂತಹ ಕೆಲವು ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲ ವಿಮಾನ ನಿಲ್ದಾಣಗಳು ಕಳೆದ ಮೂರು ವಿತ್ತ ವರ್ಷಗಳಿಂದ ನಷ್ಟವನ್ನು ಅನುಭವಿಸುತ್ತಿವೆ ಎಂದೂ ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X