Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮಹಿಳಾ ಶಕ್ತಿ ಮೂಲಕ ಕೊಳಚೆ ಮುಕ್ತ...

ಉಡುಪಿ: ಮಹಿಳಾ ಶಕ್ತಿ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಯೋಜನೆ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ13 Dec 2021 7:23 PM IST
share
ಉಡುಪಿ: ಮಹಿಳಾ ಶಕ್ತಿ ಮೂಲಕ ಕೊಳಚೆ ಮುಕ್ತ ಗ್ರಾಮ ನಿರ್ಮಾಣಕ್ಕೆ ಯೋಜನೆ ಸಿದ್ಧ

ಉಡುಪಿ: ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿ ದ್ರವ ತ್ಯಾಜ್ಯ ನಿರ್ವಹಣೆ ಪ್ರಮುಖ ಘಟಕಾಂಶವಾಗಿದ್ದು, ಸಮರ್ಪಕ ದ್ರವ ತ್ಯಾಜ್ಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಗ್ರಾಪಂಗಳ ವಿಸ್ತೃತ ಯೋಜನೆಯನ್ನು ಸಿದ್ದಪಡಿಸಿ, ಯೋಜನೆಯ ಅನುಷ್ಠಾನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.

ಗ್ರಾಮಗಳಲ್ಲಿ ದಿನನಿತ್ಯ ಸ್ನಾನದ ಮನೆಯಿಂದ, ಪಾತ್ರೆ ತೊಳೆಯುವುದರಿಂದ, ಬಟ್ಟೆ ಒಗೆಯುವುದಿಂದ ಮನೆಗಳಲ್ಲಿ ಉತ್ಪತ್ತಿಯಾಗುವ ಹಾಗೂ ಹೋಟೆಲ್, ಮದುವೆ ಹಾಲ್ ಇತ್ಯಾದಿ ವಾಣಿಜ್ಯ ಕೇಂದ್ರಗಳಿಂದ ಉತ್ಪತ್ತಿಯಾಗುವ ಬೂದು ನೀರನ್ನು ಕಿಚನ್ ಗಾರ್ಡನ್ ಮೂಲಕ, ವೈಯಕ್ತಿಕ ಅಥವಾ ಸಮುದಾಯ ಹಂತದ ಸೋಕ್‌ಪಿಟ್ ನಿರ್ಮಾಣ ಅಥವಾ ಇತರೆ ಸೂಕ್ತ ವಿಧಾನದ ಮೂಲಕ ವೈಜ್ಞಾನಿಕವಾಗಿ ಮಾಡಬೇಕಾಗುತ್ತದೆ.

ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಲು ಕೊಳಚೆ ಮುಕ್ತ ಗ್ರಾಮದೆಡೆ ಮಹಿಳಾ ಶಕ್ತಿ ನಡೆ-ದ್ರವ ತ್ಯಾಜ್ಯ ನಿರ್ವಹಣೆ ವಿಶೇಷ ಅಭಿಯಾನ ಎಂಬ ಜಾಗೃತಿ ಕಾರ್ಯಕ್ರಮದ ಮೂಲಕ ದ್ರವ ತ್ಯಾಜ್ಯ ನಿರ್ವಹಣೆ ಕುರಿತಂತೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿ, ಮನೆ ಮನೆಯಲ್ಲಿ ಸೋಕ್ ಪಿಟ್ ನಿರ್ಮಿಸಿಕೊಳ್ಳುವಂತೆ ಪ್ರೇರೆಪಣೆ ನೀಡಲಾಗುತ್ತಿದೆ ಹಾಗೂ ಸಮುದಾಯದಲ್ಲಿ ಇವರ ಮೂಲಕ ಅರಿವು ಮೂಡಿಸಲಾಗುತ್ತದೆ.

ಸೋಕ್‌ಪಿಟ್ ನಿರ್ಮಾಣ: ಮನೆಯೊಂದಕ್ಕೆ 1.44 ಚದುರ ಮೀ.ನಲ್ಲಿ 0.6 ಮೀ ವ್ಯಾಸದ ಮತ್ತು 1.8 ಮೀ ಆಳದ ಇಂಗು ಗುಂಡಿ ನಿರ್ಮಿಸಬಹುದು. ಜಾಗ ಕಡಿಮೆ ಇದ್ದು, ಹಲವಾರು ಮನೆಗಳಿದ್ದರೆ ಸಾಮೂಹಿಕ ಇಂಗು ಗುಂಡಿ ನಿರ್ಮಿಸಬಹುದು. ಇದು ಒಣ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಲು ಅತ್ಯಂತ ಸಹಕಾರಿಯಾಗಲಿದೆ.

ಈ ಗುಂಡಿಗಳ ನಿರ್ಮಾಣಕ್ಕೆ ಪರಿಣಿತರ ಹಾಗೂ ತಂತ್ರಜ್ಞರ ಅಗತ್ಯವಿಲ್ಲ. ಇದನ್ನು ನಿರ್ಮಿಸಲು ತಗಲುವ ವೆಚ್ಚ ಅತ್ಯಂತ ಕಡಿಮೆ ಇದ್ದು, ಉದ್ಯೋಗ ಖಾತರಿ ಯೋಜನೆಯಡಿ ಆರ್ಥಿಕ ನೆರವೂ ಸಹ ದೊರೆಯಲಿದೆ. ನಿರ್ವ ಹಣೆಯೂ ಸುಲಭವಾಗಿದ್ದು, 5-6 ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕಾಗುತ್ತದೆ. ಸೋಕ್ ಪಿಟ್ ನಿರ್ಮಾಣದಿಂದ ಬೂದು ನೀರನ್ನು ಸಮರ್ಪಕವಾಗಿ ಬಳಸಲು ಸಹಕಾರಿಯಾಗಲಿದ್ದು, ಬೂದು ನೀರು ಅಲ್ಲಲ್ಲಿ ನಿಲ್ಲುವುದು ತಪ್ಪುತ್ತದೆ. ಈ ನೀರನ್ನು ಕಿಚನ್ ಗಾರ್ಡನ್‌ಗಳಿಗೆ ಬಳಸಬಹುದಾಗಿದ್ದು, ಇದರಿಂದ ವ್ಯರ್ಥ ವಾಗಿ ನೀರಿ ಹರಿದು ಹೋಗುವುದು ತಪ್ಪುವುದರೊಂದಿಗೆ ಸುಂದರ ಪರಿಸರ ನಿರ್ಮಾಣವಾಗಲಿದೆ.

18ರಂದು ಕಾರ್ಯಕ್ರಮಕ್ಕೆ ಚಾಲನೆ
ಉಡುಪಿಯ ಕೊಡಿಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಈ ಕಾರ್ಯಕ್ರಮಕ್ಕೆ ಡಿ.18ರಂದು ಚಾಲನೆ ನೀಡಲಾಗುತ್ತಿದೆ. ಇದರಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಮಾಹಿತಿ ಕಾರ್ಯಕ್ರಮ, ದ್ರವ ತ್ಯಾಜ್ಯ ವಿಸ್ತೃತ ಯೋಜನಾ ವರದಿಯ ಮಂಡನೆ ಮತ್ತು ಚರ್ಚೆ, ವಿವಿಧ ಕಿರುಚಿತ್ರಗಳ ಪ್ರದರ್ಶನ, ದ್ರವ ತ್ಯಾಜ್ಯ ನಿರ್ವಹಣೆ ವಸ್ತು ಪ್ರದರ್ಶನ, ಸೋಕ್ ಪಿಟ್ ನಿರ್ಮಾಣದ ಪ್ರಾತ್ಯಕ್ಷಿಕೆ, ವಾಣಿಜ್ಯ ಕೇಂದ್ರಗಳಿಗೆ ತೆರಳಿ ಅರಿವು ಮೂಡಿ ಸುವುದು ಮುಂತಾದ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ.

ಪ್ರತಿ ತಾಲೂಕಿನ ಒಂದು ಗ್ರಾಪಂ ಆಯ್ಕೆ
ಪ್ರಥಮ ಹಂತದಲ್ಲಿ ದ್ರವ ನಿರ್ವಹಣೆ ಕುರಿತು ಪ್ರತಿ ತಾಲೂಕಿನಲ್ಲಿ ಒಂದೊಂದು ಗ್ರಾಪಂಗಳನ್ನು ಗುರುತಿಸಿ, ಆ ಗ್ರಾಪಂ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಹಕಾರದೊಂದಿಗೆ, ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮಾದರಿ ಗ್ರಾಮಗಳನ್ನು ನಿರ್ಮಾಣ ಮಾಡಲು ಕೊಳಚೆ ಮುಕ್ತ ಗ್ರಾಮದೆಡೆ ಮಹಿಳಾ ಶಕ್ತಿ ನಡೆ- ದ್ರವ ತ್ಯಾಜ್ಯ ನಿರ್ವಹಣೆ ವಿಶೇಷ ಅಭಿಯಾನ ಎಂಬ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ.

ಉಡುಪಿಯ ತಾಲೂಕಿನ ಕೊಡಿಬೆಟ್ಟು, ಬ್ರಹ್ಮಾವರದ ಚೇರ್ಕಾಡಿ, ಕಾಪುವಿನ ಎಲ್ಲೂರು, ಕುಂದಾಪುರದ ಹಕ್ಲಾಡಿ, ಬೈಂದೂರಿನ ಗೋಳಿಹೊಳೆ, ಹೆಬ್ರಿ ಮಡಾಮಕ್ಕಿ ಹಾಗೂ ಕಾರ್ಕಳದ ಹಿರ್ಗಾನ ಗ್ರಾಪಂಗಳಲ್ಲಿ ಈ ಕಾಯರ್ಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ.

ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ದ್ರವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸೋಕ್‌ಪಿಟ್‌ಗಳ ನಿರ್ಮಾಣ ಸಹಕಾರಿಯಾಗಲಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿ ಸೋಕ್ ಪಿಟ್ ನಿರ್ಮಾಣ ಮಾಡಿಕೊಳ್ಳುವ ಮೂಲಕ ಕೈ ತೋಟ, ಪೌಷ್ಠಿಕ ತೋಟಗಳನ್ನು ನಿರ್ಮಿಸಿಕೊಳ್ಳಬಹುದಾಗಿದೆ. ಈ ವಿಧಾನ ಜಿಲ್ಲೆಗೆ ಹೆಚ್ಚು ಸೂಕ್ತವಾಗಲಿದೆ. ಇದರಿಂದ ವೈಜ್ಞಾನಿಕ ರೀತಿಯಲ್ಲಿ ಅಂತರ್ಜಲದ ವೃದ್ಧಿಯೂ ಆಗಲಿದೆ.
-ಡಾ.ನವೀನ್ ಭಟ್, ಸಿಇಓ, ಜಿಪಂ, ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X