Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕಾಲಿಕ ಮಳೆಯಿಂದ ಅಪಾರ ನಷ್ಟ: ಕೇಂದ್ರ...

ಅಕಾಲಿಕ ಮಳೆಯಿಂದ ಅಪಾರ ನಷ್ಟ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನಯಾಪೈಸೆ ಇಲ್ಲ; ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Dec 2021 7:29 PM IST
share
ಅಕಾಲಿಕ ಮಳೆಯಿಂದ ಅಪಾರ ನಷ್ಟ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನಯಾಪೈಸೆ ಇಲ್ಲ; ಸಿದ್ದರಾಮಯ್ಯ ಆರೋಪ

ಬೆಳಗಾವಿ, ಡಿ. 13: ರಾಜ್ಯದಲ್ಲಿ ಇತ್ತಿಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳ ನಷ್ಟ ಆಗಿದ್ದು, ನಾಡಿನ ರೈತರ ಕಷ್ಟ ಹೇಳತೀರದಾಗಿದೆ. ಆದರೆ, ಕೇಂದ್ರ ಸರಕಾರದಿಂದ ಈ ವರ್ಷ ರಾಜ್ಯಕ್ಕೆ ನಯಾಪೈಸೆ ಪರಿಹಾರದ ಹಣ ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲ ಪ್ರಶ್ನೋತ್ತರ ಅವಧಿಯ ಬಳಿಕ ಮಳೆ, ಪ್ರವಾಹ, ಅತಿವೃಷ್ಟಿಯಿಂದಾಗಿ ನಾಡಿನ ರೈತರು ಎದುರಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ನಿಳುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪಿಸಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸತತ 3 ವರ್ಷಗಳು ಪ್ರವಾಹ, ಅತಿವೃಷ್ಟಿ ಹಾಗೂ ಕೆಲವು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಕಂಡಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೂರು ಬಾರಿ ಪ್ರವಾಹ ಬಂದಿದೆ. 

ಮೇ ತಿಂಗಳಲ್ಲಿ ಚೌಕ್ತೆ ಚಂಡಮಾರುತ, ಜುಲೈ-ಆಗಸ್ಟ್‍ನಲ್ಲಿ ಪ್ರವಾಹ ಹಾಗೂ ಅಕ್ಟೋಬರ್- ನವೆಂಬರ್‍ನಲ್ಲಿ ಅತಿವೃಷ್ಟಿ ಆಗಿದೆ. 60 ವರ್ಷಗಳಲ್ಲೇ ನವೆಂಬರ್ ತಿಂಗಳಲ್ಲಿ ಈ ರೀತಿಯ ಮಳೆಯಾಗಿರಲಿಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ 23 ಜಿಲ್ಲೆಗಳು ಅತಿವೃಷ್ಟಿಗೀಡಾಗಿವೆ ಎಂದು ತಿಳಿಸಿದರು.

ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿದ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ. 75 ರಷ್ಟು ಬೆಳೆ ಹಾನಿಯಾಗಿದೆ. ಭತ್ತ, ರಾಗಿ, ಶೇಂಗಾ, ಮೆಕ್ಕೆಜೋಳ, ಕಾಫಿ, ಮೆಣಸು, ಅಡಿಕೆ ಮುಂತಾದ ಹಣ್ಣು, ತರಕಾರಿ, ಹೂವು ಬೆಳೆದ ರೈತರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ.

ಒಟ್ಟು ಈ ವರ್ಷ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಪ್ರವಾಹ, ಅತಿವೃಷ್ಟಿಗಳಿಂದಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ರೂ. 2.5 ಲಕ್ಷ ಕೋಟಿ ನಷ್ಟವಾಗಿದೆ ಎಂದು ಅವರು ವಿವರಿಸಿದರು.

ಅಕ್ಟೋಬರ್-ನವೆಂಬರ್ ನಲ್ಲಿ ವಾಡಿಕೆಯಂತೆ 166 ಮಿ.ಮೀ ಮಳೆ ಆಗಬೇಕಿತ್ತು, ಆದರೆ ಈ ವರ್ಷ 307 ಮಿ.ಮೀ ಮಳೆಯಾಗಿದೆ. ಮುಂಗಾರು ಈ ತಿಂಗಳುಗಳಲ್ಲಿ ಕೈಸೇರಬೇಕಿದ್ದ ಮುಂಗಾರು ಬೆಳೆಯ ಫಸಲು ಸಂಪೂರ್ಣ ನಷ್ಟವಾಗಿದೆ.

ಹಿಂದಿನ ಯು.ಪಿ.ಎ ಸರಕಾರದ ಬಜೆಟ್ ಗಾತ್ರ, ಇಂದಿನ ಬಜೆಟ್ ಗಾತ್ರ, 2014-15 ರಲ್ಲಿ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲೆ ಸಂಗ್ರಹವಾಗುತ್ತಿದ್ದ ತೆರಿಗೆ ಹಾಗೂ ಈ ಸಾಲಿನಲ್ಲಿ ಸಂಗ್ರಹವಾಗಿರುವ ತೆರಿಗೆ, ಹಿಂದಿನ ಯು.ಪಿ.ಎ ಸರಕಾರ ನೀಡಿದ್ದ ಪ್ರವಾಹ ಪರಿಹಾರ ಹಾಗೂ ನರೇಂದ್ರ ಮೋದಿ ಅವರ ಸರ್ಕಾರ ನೀಡಿರುವ ಪರಿಹಾರದ ವಿಷಯಗಳನ್ನು ನಾಳೆ ವಿವರವಾಗಿ ಚರ್ಚಿಸುವೆ ಎಂದು ಸಿದ್ದರಾಮಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X