ಉಡುಪಿ: ಮೂವರಿಗೆ ಕೋವಿಡ್ ಸೋಂಕು ದೃಢ
ಉಡುಪಿ, ಡಿ.13: ಜಿಲ್ಲೆಯಲ್ಲಿ ಸೋಮವಾರ ಮೂವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ದಿನ ಒಟ್ಟು ಐದು ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 53 ಸಕ್ರಿಯ ಕೋವಿಡ್ ಪ್ರಕರಣ ಜಿಲ್ಲೆಯಲ್ಲಿವೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76961ಕ್ಕೆ ಏರಿಕೆಯಾಗಿದ್ದು, ಒಟ್ಟು 76431 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Next Story





