Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ‘ಐಎನ್‍ಎಸ್ ಶಿವಾಲಿಕ್’ ಮಾದರಿಯ...

ಮಡಿಕೇರಿ: ‘ಐಎನ್‍ಎಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ13 Dec 2021 11:23 PM IST
share
ಮಡಿಕೇರಿ: ‘ಐಎನ್‍ಎಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆ ಲೋಕಾರ್ಪಣೆ

ಮಡಿಕೇರಿ ಡಿ.13 : ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಹೊಸದಾಗಿ ಸೇರ್ಪಡೆ ಆಗಿರುವ ‘ಐಎನ್‍ಎಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆಯನ್ನು ಭಾರತೀಯ ನೌಕಪಡೆಯ ಪೂರ್ವ ವಿಭಾಗದ ವೈಸ್ ಅಡ್ಮಿರಲ್ ಭಿಸ್ವಜಿತ್ ದಾಸ್ ಗುಪ್ತ ಅವರು ಸೋಮವಾರ ಲೋಕಾರ್ಪಣೆ ಮಾಡಿದರು.  

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿರುವ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದ ಬಳಿಕ, ಐಎನ್‍ಎಸ್ ಶಿವಾಲಿಕ್ ಮಾದರಿಯು ಯುದ್ದ ನೌಕೆಯನ್ನು ಉದ್ಘಾಟಿಸಿದರು.  

ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವೈಸ್ ಅಡ್ಮಿರಲ್ ಭಿಸ್ವಜಿತ್ ದಾಸ್ ಗುಪ್ತ ಅವರು ಯುವ ಜನರು ನೌಕಾಪಡೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುವಂತಾಗಬೇಕು ಎಂದು ಕರೆ ನೀಡಿದರು. 

ಭಾರತೀಯ ನೌಕಾದಳವು ಅತ್ಯುತ್ತಮ ಮಾದರಿ ನೌಕಾ ಸೇನೆ ಹೊಂದಿದೆ. ಭಾರತೀಯ ನೌಕಾಪಡೆಗೆ ತನ್ನದೇ ಆದ ಸ್ಥಾನವಿದ್ದು, ನೌಕಾಪಡೆಗೆ ಹೆಚ್ಚಿನ ಯುವಜನರು ಸೇರ್ಪಡೆಯಾಗಬೇಕು ಎಂದರು.  

ಕೊಡಗಿನ ಜನರು ಸೇನಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸೇನಾ ಕ್ಷೇತ್ರವೆಂದರೆ ಹೆಚ್ಚಿನ ಗೌರವ ಭಾವನೆ ಹೊಂದಿದ್ದಾರೆ ಎಂದು ವೈಸ್ ಅಡ್ಮಿರಲ್ ದಾಸ್ ಗುಪ್ತ ಅವರು ಶ್ಲಾಘಿಸಿದರು.  

ಭಾರತೀಯ ನೌಕಾಪಡೆಯಿಂದ ಭವಿಷ್ಯದಲ್ಲಿ 41 ಯುದ್ದ ಹಡಗು ನಿರ್ಮಾಣವಾಗಲಿದ್ದು, ಇದರಲ್ಲಿ 31 ಯುದ್ಧ ಹಡಗುಗಳನ್ನು  ಭಾರತದಲ್ಲಿಯೇ ನಿರ್ಮಾಣ ಮಾಡಲು ಮುಂದಾಗಲಾಗಿದೆ. ಮುಂಬಯಿ, ಕೊಲ್ಕತ್ತ, ಗೋವಾ, ವಿಶಾಖಪಟ್ಟಣ ಇಲ್ಲಿ ನಿರ್ಮಾಣವಾಗಲಿದೆ. ಹಾಗೆಯೇ ಕೊಚ್ಚಿನ್‍ನಲ್ಲಿ ಖಾಸಗಿಯಾಗಿ ಯುದ್ಧ ಹಡಗು ನಿರ್ಮಾಣವಾಗಲಿದೆ. ರಾಷ್ಟ್ರದ ಭದ್ರತೆಗೆ ನೌಕಾಪಡೆ ಹೆಚ್ಚಿನ ಒತ್ತು ನೀಡಿದೆ ಎಂದು ಭಿಸ್ವಜಿತ್ ದಾಸ್ ಗುಪ್ತ ಅವರು ತಿಳಿಸಿದರು. 

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷರಾದ ಕರ್ನಲ್(ನಿವೃತ್ತ) ಕೆ.ಸಿ.ಸುಬ್ಬಯ್ಯ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ಅಭಿವೃದ್ಧಿಗೆ ಭಾರತೀಯ ಸೇನಾ ವಿಭಾಗದ ವಾಯುಪಡೆ, ನೌಕಾಪಡೆ, ಭೂಸೇನಾಪಡೆ ಹೀಗೆ ಎಲ್ಲರೂ ಕೈಜೋಡಿಸಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಹಕಾರ ನೀಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.   

ರಿಯರ್ ಅಡ್ಮಿರಲ್ ಉತ್ತಯ್ಯ ಅವರು ನೌಕಾಪಡೆಯ ಸಬ್‍ಮೇರಿಯನ್ ಉದ್ಘಾಟಿಸಿದರು. ಲೆ.ಜನರಲ್ ಪಿ.ಸಿ.ತಿಮ್ಮಯ್ಯ(ನಿವೃತ್ತ) ಅವರು ರಿಯರ್ ಅಡ್ಮಿರಲ್ ಉತ್ತಯ್ಯ ಅವರಿಗೆ ಉಡಿಕತ್ತಿ ನೀಡಿ ಗೌರವಿಸಿದರು. 

ಲೆ.ಜನರಲ್(ನಿವೃತ್ತ) ಕೆ.ಪಿ.ನಂಜಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಇತರರು ಇದ್ದರು. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ವಾಗತಿಸಿದರು. ಸಿ.ಟಿ.ಪಂಚಮ್ ಅವರು ನಾಡಗೀತೆ ಹಾಡಿದರು. ಮೇಜರ್(ನಿವೃತ್ತ) ಬಿದ್ದಂಡ ನಂಜಪ್ಪ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಅವರು ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ತಿಮ್ಮಯ್ಯ ಅವರ ಜೀವನ, ಸೇನಾ ಕ್ಷೇತ್ರದಲ್ಲಿನ ಸಾಧನೆಯನ್ನು ವೈಸ್ ಅಡ್ಮಿರಲ್ ಅವರು ವೀಕ್ಷಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X