ಶ್ರೀನಗರದಲ್ಲಿ ಭಯೋತ್ಪಾದಕ ದಾಳಿ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಪೊಲೀಸ್ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.
ಹುತಾತ್ಮರಾದ ಜಮ್ಮು ಹಾಗೂ ಕಾಶ್ಮೀರ ಪೊಲೀಸ್ ಸಿಬ್ಬಂದಿಯನ್ನು ಗಂದರ್‌ಬಾಲ್ ಜಿಲ್ಲೆಯ ಯಚಾಮಾ ಕಂಗನ್‌ನ ರಮೀಝ್ ಅಹ್ಮದ್ ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಶ್ರೀನಗರದ ಪಂಥಾ ಚೌಕ್ ಪ್ರದೇಶದ ಝೆವಾನ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ ಕನಿಷ್ಠ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಪ್ರದೇಶವನ್ನು ಸುತ್ತುವರಿಯಲಾಗಿದೆ ಹಾಗೂ ದಾಳಿಕೋರರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಯಿತು.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು ವಿವರ ಕೇಳಿದ್ದಾರೆ.
Next Story





