ವಿಧಾನ ಪರಿಷತ್ ಚುನಾವಣೆ: ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜಯ
84 ಮತಗಳು ಅಸಿಂಧು

ಕಾಂಗ್ರೆಸ್ ವಿಜೇತ ಅಭ್ಯರ್ಥಿ ಭೀಮರಾವ್ ಪಾಟೀಲ್
ಬೀದರ್: ವಿಧಾನಪರಿಷತ್ ನ ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 1,789 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ 1562 ಮತಗಳನ್ನು ಪಡೆದುಕೊಂಡಿದ್ದಾರೆ.
ಭೀಮರಾವ್ ಪಾಟೀಲ್ ಬಿಜೆಪಿ ಅಭ್ಯರ್ಥಿ ವಿರುದ್ಧ 227 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಆಮ್ ಆದ್ಮಿಯ ಗೋವಿಂದರಾವ್ ಸೋಮವಂಶಿ 15 ಮತಗಳು ಪಡೆದುಕೊಂಡರೆ, ಒಟ್ಟು 84 ಮತಗಳು ತಿರಸ್ಕೃತಗೊಂಡಿವೆ.
Next Story





