ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ್ ಗೆ ಜಯ
ವಿಜಯಪುರ -ಬಾಗಲಕೋಟೆ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆ

ಕಾಂಗ್ರೆಸ್ ವಿಜೇತ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ್
ವಿಜಯಪುರ, ಡಿ.14: ತೀವ್ರ ಕುತೂಹಲ ಮೂಡಿಸಿರುವ ವಿಜಯಪುರ ಬಾಗಲಕೋಟ ದ್ವಿಸದಸ್ಯತ್ವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ಸುನೀಲಗೌಡ ಪಾಟೀಲ್ 3,332 ಮತಗಳನ್ನು ಗಳಿಸಿದರೆ, ಬಿಜೆಪಿಯ ಪಿ.ಎಚ್.ಪೂಜಾರ್ ಗೆ 2,222 ಮತಗಳು ಲಭಿಸಿವೆ. ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ 1459 ಮತಗಳನ್ನು ಗಳಿಸಿ ತೃತೀಯ ಸ್ಥಾನದಲ್ಲಿದ್ದಾರೆ.
ಎರಡನೇ ಆದ್ಯತೆ ಮತಗಳ ಎಣಿಕೆ ಕಾರ್ಯ ಮುಂದುವರಿದಿದೆ.
Next Story





