ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ ಗೆಲುವು
ವಿಧಾನ ಪರಿಷತ್ ಚುನಾವಣೆ

ಕಲಬುರಗಿ, ಡಿ.14: ಕಲಬುರಗಿ-ಯಾದಗಿರಿ ಕ್ಷೇತ್ರದ ವಿಧಾನ ಪರಿಷತ್ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ 2ನೇ ಬಾರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ತೀವ್ರ ಪೈಪೋಟಿ ನೀಡಿದರೂ ಅಂತಿಮವಾಗಿ ಬಿ.ಜಿ.ಪಾಟೀಲ್ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಮತಗಳ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಕಲಬುರಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.
ಬಿಜೆಪಿ ಕಾರ್ಯಕರ್ತರು ಮತಗಟ್ಟೆಯ ಎದುರು ಗೆಲುವಿನ ಸಂಭ್ರಮ ಆಚರಿಸಿದರು.
Next Story





