ಮೈಸೂರು: ಬಿಸಿ ನೀರಿಗೆ ಬಿದ್ದು 2 ವರ್ಷದ ಮಗು ಮೃತ್ಯು

ಮೈಸೂರು: ಬಿಸಿ ನೀರಿಗೆ ಬಿದ್ದ ಪುಟ್ಟ ಮಗುವೊಂದು ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ರಾಮು-ಜಯಲಕ್ಷ್ಮೀ ದಂಪತಿಯ ಪುತ್ರಿ ಆದ್ಯಾ(2) ಮೃತಟ್ಟಿರುವ ಮಗು.
ತಾಯಿ ಹೊರಗೆ ಹೋದ ಮೇಲೆ ಮಗು ಬಿಸಿ ನೀರಿನಲ್ಲಿ ಬಿದ್ದಿದೆ. ಮಗುವಿನ ಚೀರಾಟ ಕೇಳಿ ಓಡಿ ಬಂದು ನೋಡಿದಾಗ ನೀರಿಗೆ ಬಿದ್ದಿರುವುದು ಗೊತ್ತಾಗಿದೆ.
ತಕ್ಷಣ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೆ.ಆರ್.ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story





