ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಜಯ
ಬಿಜೆಪಿಗೆ ಭಾರೀ ಮುಖಭಂಗ

ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ
ಬೆಳಗಾವಿ: ಬೆಳಗಾವಿಯ ದ್ವಿಸದಸ್ಯ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಿರಿಯ ಸಹೋದರರಾಗಿದ್ದು, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಹೋದರರಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಮೊದಲ ಪ್ರಾಶಸ್ತ್ಯದ 3178 ಮತಗಳು ಪಡೆದರೆ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ದ್ವಿತೀಯ ಪ್ರಾಶಸ್ತ್ಯದ 408 ಮತಗಳು ಪಡೆದು ಗೆಲುವು ಸಾಧಿಸಿ ಎರಡನೇ ಸ್ಥಾನದಲ್ಲಿದ್ದಾರೆ, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನದಲ್ಲಿದ್ದು, ಬಿಜೆಪಿ ನಾಯಕರಿಗೆ ಮುಖಭಂಗ ಎದುರಿಸುವಂತಾಗಿದೆ.
Next Story





