ಪರಿಷತ್ ಚುನಾವಣೆ ಗೆಲುವು: ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ಸುಳ್ಯ: ವಿಧಾನ ಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಮಂಗಳವಾರ ಬಿಜೆಪಿ ವಿಜಯೋತ್ಸವ ಆಚರಿಸಿತು.
ಬಿಜೆಪಿ ಕಚೇರಿ ಬಳಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ನಾಯಕರು ಮತ್ತು ಕಾರ್ಯಕರ್ತರು ಸಂಭ್ರಮಿಸಿದರು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನವಾಗಿ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ನವೀನ್ ಕುಮಾರ್ ಮೇನಾಲ, ಚಂದ್ರ ಕೋಲ್ಚಾರ್, ಮಹೇಶ್ ಕುಮಾರ್ ಮೇನಾಲ, ಚನಿಯ ಕಲ್ತಡ್ಕ, ಬೂಡು ರಾಧಾಕೃಷ್ಣ ರೈ, ಸುನಿಲ್ ಕೇರ್ಪಳ, ಜಿನ್ನಪ್ಪ ಪೂಜಾರಿ, ಹೊನ್ನಪ್ಪ ಗೌಡ,ಸಚಿನ್, ಎ.ಜಿ.ಸುಧಾಕರ ತೊಡಿಕಾನ,ಚಂದ್ರ ನೆಡೀಲು ಮತ್ತಿತರರು ಉಪಸ್ಥಿತರಿದ್ದರು.
Next Story





