ಬಡಗಬೆಟ್ಟು ಸೊಸೈಟಿಗೆ ಸಾಧನಾ ಪ್ರಶಸ್ತಿ ಪ್ರದಾನ

ಉಡುಪಿ, ಡಿ.14: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅವಿಭಜಿತ ದ.ಕ ಜಿಲ್ಲೆಯಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಇಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆ ಯಲ್ಲಿ ಸತತವಾಗಿ 15ನೆ ಬಾರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಉಡುಪಿ ಹಾಗೂ ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ ಉಪಸ್ಥಿತಿಯಲ್ಲಿ ಬಡಗಬೆಟ್ಟು ಸೊಸೈಟಿಯ ಉಪಾಧ್ಯಕ್ಷ ಎಲ್.ಉಮಾನಾಥ್, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ಧರು.
Next Story





