ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು: ಸಿಎಂ ಜೊತೆ ಚರ್ಚಿಸಿ ಕ್ರಮ; ಸಚಿವ ಆರ್.ಅಶೋಕ್
ಬೆಳಗಾವಿ ಸುವರ್ಣಸೌಧ, ಡಿ.14: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರು ನಾಮಕರಣ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಮಂಗಳವಾರ ಪರಿಷತ್ತಿನಲ್ಲಿ ಸದಸ್ಯ ಹರೀಶ್ ಕುಮಾರ ಅವರು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಅಭಿಪ್ರಾಯದಂತೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಅವರು ಹೆಸರು ನಾಮಕರಣ ಮಾಡಲು ಸರಕಾರ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವರು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Next Story