ವಿಧಾನ ಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ, ಡಿ. 14: ಪಂಜಾಬ್ನಲ್ಲಿ ವಿಧಾನ ಸಭಾ ಚುನಾವಣಾ ಸಿದ್ಧತೆ ಪರಿಶೀಲಿಸಲು ಚುನಾವಣಾ ಆಯೋಗ ಬುಧವಾರ ಪಂಜಾಬ್ ಗೆ ಭೇಟಿ ನೀಡಲಿದೆ. ಚುನಾವಣೆ ನಡೆಯಲಿರುವ ಇತರ ರಾಜ್ಯಗಳಿಗೆ ಭೇಟಿ ನೀಡುವ ದಿನಾಂಕವನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
‘‘ಚುನಾವಣಾ ಆಯೋಗ ಡಿಸೆಂಬರ್ 15ರಂದು ಚಂಡಿಗಢಕ್ಕೆ ಭೇಟಿ ನೀಡಲಿದೆ. ಅಲ್ಲಿ ಪರಿಶೀಲನಾ ಸಭೆ ನಡೆಸಲಿದೆ. ಇತರ ರಾಜ್ಯಗಳಿಗೆ ಭೇಟಿ ನೀಡುವ ವೇಳಾ ಪಟ್ಟಿಯನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿದೆ’’ ಎಂದು ಅವರು ತಿಳಿಸಿದ್ದಾರೆ. ಚುನಾವಣೆಗೆ ದಿನಾಂಕ ಘೋಷಿಸುವ ಮುನ್ನ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಚುನಾವಣಾ ಆಯೋಗ ಭೇಟಿ ನೀಡುವುದು ಸಂಪ್ರದಾಯ. ಮುಖ್ಯ ಚುನಾವಣಾ ಆಯುಕ್ತರಾದ ಸುಶೀಲ್ ಚಂದ್ರ ಹಾಗೂ ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ರಾಜೀವ್ ಕುಮಾರ್ ಚುನಾವಣೆ ನಡೆಯಲಿರುವ ಐದು ರಾಜ್ಯಗಳಾದ ಪಂಜಾಬ್, ಗೋವಾ, ಉತ್ತರಾಖಂಡ, ಉತ್ತರಪ್ರದೇಶ ಹಾಗೂ ಮಣಿಪುರಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.
Next Story





