ವಿವಿ ಮಟ್ಟದ ಮಂಗಳೂರು ವಲಯ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ

ಉಡುಪಿ, ಡಿ.14: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇದರ 2021- 22ನೆ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಪುರುಷರ ಕಬಡ್ಡಿ ಪಂದ್ಯಾವಳಿಯು ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆಯಿತು.
ಪಂದ್ಯಾವಳಿಯನ್ನು ಉದ್ಘಾಟಿಸಿದ ಕಾಪು ಪೋಲೀಸ್ ವೃತತಿ ನಿರೀಕ್ಷಕ ಪ್ರಕಾಶ್ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳ ಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಕಾಲೇಜಿನ ಉಪಪ್ರಾಂಶು ಪಾಲ ಡಾ.ಗಣೇಶ ಐತಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕ ಸಚಿನ್ ಪ್ರಭು ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಮುರಳೀಧರ ಶರ್ಮ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಅಕ್ಷತ ಅತಿಥಿ ಗಳನ್ನು ಪರಿಚಯಿಸಿ, ವಿದ್ಯಾರ್ಥಿನಿ ಅನಿಂದಿತ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಲಯದ ವಿವಿಧ ತಾಂತ್ರಿಕ ಕಾಲೇಜುಗಳ 13 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.







