ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ: ಆರೋಪಿಯ ಸೆರೆ
ಚಿಕ್ಕಬಳ್ಳಾಪುರ, ಡಿ.15: ದಿಲ್ಲಿ ಮತ್ತು ಕರ್ನಾಟಕ ನಡುವೆ ಸಂಚರಿಸುವ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿಯೊಬ್ಬ ಕರೆ ಮಾಡಿದ್ದ ಹಿನ್ನೆಲೆಯಲ್ಲಿ, ಬಾಂಬ್ ನಿಷ್ಕ್ರಿಯ ದಳ, ರೈಲ್ವೆ ಹಾಗೂ ಪೊಲೀಸ್ ಅಧಿಕಾರಿಗಳು ರೈಲಿನಲ್ಲಿ ತಪಾಸಣೆ ನಡೆಸಿದ್ದಾರೆ.ಈ ವೇಳೆ ಇದೊಂದು ಹುಸಿ ಕರೆ ಎಂಬುದನ್ನು ದೃಢಪಟ್ಟಿದ್ದು, ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ರಾಯಚೂರಿನ ವಾಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೆಕೆ ಎಕ್ಸ್‌ಪ್ರೆಸ್ ಆಂಧ್ರ ಪ್ರದೇಶ ದಾಟಿದ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರು ತಲುಪುತ್ತದೆ. ಚಲಿಸುತ್ತಿರುವ ರೈಲಿನಲ್ಲೇ ಬಾಂಬ್ ಬಗ್ಗೆ ತಪಾಸಣೆ ನಡೆಸಲಾಗಿದೆ ಬೆಂಗಳೂರು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
Next Story





