ಡಿ.17 ರಿಂದ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ
ಉಡುಪಿ, ಡಿ.15: ಜಿಲ್ಲಾ ಪಶುಪಾಲನಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ, ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕೆ ನೀಡುವ ಅಭಿಯಾನ ಡಿ.17 ರಿಂದ ಪ್ರಾರಂಭಗೊಂಡು ಒಂದು ತಿಂಗಳವರೆಗೆ ನಡೆಯಲಿದೆ.
ಜಾನುವಾರು ಗಣತಿಯ ಪ್ರಕಾರ ಜಿಲ್ಲೆಯಲ್ಲಿ 2.57 ಲಕ್ಷ ಜಾನುವಾರುಗಳಿದ್ದು, ಜಿಲ್ಲೆಯ ಹೈನುಗಾರರು ಕಾಲುಬಾಯಿ ಜ್ವರದ ಲಸಿಕಾ ಅಭಿಯಾನಕ್ಕೆ ಸಹಕರಿ ಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





