Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸಲು...

ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ15 Dec 2021 8:36 PM IST
share
ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

ಬೆಳಗಾವಿ, ಡಿ. 15: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಹಾಗೂ ವ್ಯಾಟ್ ಕಡಿತಗೊಳಿಸುವ ಸಂಬಂಧ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಶರತ್ ಬಚ್ಚೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಾರಿಗೆ ಸಂಸ್ಥೆ ನಷ್ಟದ ಸುಳಿಯಿಂದ ಲಾಭದಾಯಕದತ್ತ ತರಲು ಸಲಹೆಗಳನ್ನು ನೀಡಲು ಸರಕಾರ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ, ಸಾರ್ವಜನಿಕರಿಗೆ ಹೊರೆಯಾಗದಂತೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದರು.

ಜೊತೆಗೆ ಟೋಲ್‍ಗಳಲ್ಲಿ ಸಾರಿಗೆ ಸಂಸ್ಥೆ ವಾಹನಗಳಿಗೆ ಮುಕ್ತ ಸಂಚಾರಕ್ಕೂ ಅವಕಾಶ ಕಲ್ಪಿಸುವ ಸಂಬಂಧ ಅಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿ. ಶ್ರೀರಾಮುಲು ತಿಳಿಸಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಶರತ್ ಬಚ್ಚೇಗೌಡ, ಮೂರು ವರ್ಷಗಳಿಂದ ಸಾರಿಗೆ ಸಂಸ್ಥೆಗಳು ನಷ್ಟದ ಸುಳಿಗೆ ಸಿಲುಕಿದ್ದು ಇದಕ್ಕೆ ಮೂಲ ಕಾರಣ ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಹಾಗೂ ವ್ಯಾಟ್ ಹೆಚ್ಚಳ. ಹೀಗಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ತೆರಿಗೆ ಕಡಿಮೆ ಮಾಡಿಸಬೇಕು. ಜೊತೆಗೆ ಟೋಲ್‍ಗಳಲ್ಲಿ ಸಾರಿಗೆ ವಾಹನಗಳಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ಮೊತ್ತವನ್ನು ಸರಕಾರ ತ್ವರಿತಗತಿಯಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಚಾರ ಮಿತಿ ಹೆಚ್ಚಳ ಪರಿಶೀಲನೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ಗಳಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಸಂಚಾರ ಮಿತಿಯನ್ನು 100 ಕಿ.ಮೀ.ಗೆ ಏರಿಸುವ ಬಗ್ಗೆ ಪರಿಶೀಲಿಸುವುದು ಎಂದು ಶ್ರೀರಾಮುಲು ತಿಳಿಸಿದರು.

ಜೆಡಿಎಸ್‍ನ ಹಿರಿಯ ಸದಸ್ಯ ಎಚ್.ಕೆ.ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿದ್ಯಾರ್ಥಿ ಬಸ್ ಪಾಸ್‍ಗೆ ಹಾಲಿ ಇರುವ 60 ಕಿ.ಮೀ ಮಿತಿಯಿಂದ 100 ಕಿ.ಮೀಗೆ ಹೆಚ್ಚಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಶೈಕ್ಷಣಿಕ ದಾಖಲೆಗಳನ್ನು ಒದಗಿಸಿ ಸೇವಾಸಿಂಧು ಮೂಲಕವೂ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲ್ಲದೆ, ವಿದ್ಯಾರ್ಥಿಗಳು ತಮ್ಮ ಶಾಲೆ-ಕಾಲೇಜಿನ ಗುರುತಿನ ಚೀಟಿ, ಶುಲ್ಕ ಪಾವತಿ ರಸೀದಿಯನ್ನು ತೋರಿಸಿ ಸಾರಿಗೆ ಬಸ್‍ಗಳಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಕುಮಾರಸ್ವಾಮಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರಕಾರ ಹೆಚ್ಚಿನ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X