ಸುಳ್ಯ: ವಿದ್ಯುತ್ ತಂತಿ ಸ್ಪರ್ಶಿಸಿ ಕೃಷಿಕ ಮೃತ್ಯು
ಸುಳ್ಯ: ಕಾಳು ಮೆಣಸು ಕೊಯ್ಯುತ್ತಿದ್ದಾಗ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೀಡಾಗಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚೆಂಬು ಗ್ರಾಮದ ಊರುಬೈಲಿನಲ್ಲಿ ಬುಧವಾರ ನಡೆದಿದೆ.
ಚೆಂಬು ಊರುಬೈಲಿನ ನಡುಮನೆ ಎನ್.ಡಿ.ದಾಸಪ್ಪ ಮೃತಪಟ್ಟ ವ್ಯಕ್ತಿ. ಇವರು ತನ್ನ ತೋಟದಲ್ಲಿ ಕಾಳು ಮೆಣಸು ಕೊಯ್ದು ಕೆಳಗೆ ಇಳಿಯುತ್ತಿದ್ದಾಗ ಅಲ್ಯೂಮಿನಿಯಂ ಏಣಿ ಆಕಸ್ಮಿಕವಾಗಿ ಜಾರಿ ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಬಿದ್ದ ಕೂಡಲೇ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಮಡಿಕೇರಿ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿ ಪೋಲಿಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Next Story





